Home latest ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನ

ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನ

Hindu neighbor gifts plot of land

Hindu neighbour gifts land to Muslim journalist

ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖೆಯು 2022-23 ನೇ ಸಾಲಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಘಟಕ ಅಳವಡಿಸಲು ಸಹಾಯಧನ ಸೌಲಭ್ಯವನ್ನು ಪಡೆಯಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಸಾಮಾನ್ಯ ವರ್ಗಕ್ಕೆ ಗರಿಷ್ಟ 2 ಹೆಕ್ಟರ್ ಪ್ರದೇಶಕ್ಕೆ ಶೇ 75 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಶೇ 90 ಸಹಾಯಧನವನ್ನು ನೀಡಲಾಗುವುದು.
ಆಸಕ್ತ ರೈತರು ನಿಗಧಿತ ನಮೂನೆ ಅರ್ಜಿಯನ್ನು ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿ: 19/11/2022 ರೊಳಗಾಗಿ ಸಲ್ಲಿಸುವಂತೆ ಭದ್ರಾವತಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ಅಧಿಕಾರಿ, ಭದ್ರಾವತಿ ತಾಲೂಕು ತೋಟಗಾರಿಕೆ ಕಚೇರಿಯನ್ನು ಅಥವಾ ದೂ.ಸಂ.: 08282-295029 ನ್ನು ಸಂಪರ್ಕಿಸುವುದು.