Home latest Ganesh Chaturti Holiday: ಗಣೇಶ ಚತುರ್ಥಿಗೆ ಸೆ.19ರಂದು ಸರಕಾರಿ ರಜೆ ನೀಡಲು ಸರಕಾರದ ಆದೇಶ

Ganesh Chaturti Holiday: ಗಣೇಶ ಚತುರ್ಥಿಗೆ ಸೆ.19ರಂದು ಸರಕಾರಿ ರಜೆ ನೀಡಲು ಸರಕಾರದ ಆದೇಶ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ಗಣೇಶ ಚತುರ್ಥಿಯ ಪ್ರಯುಕ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರದ ಬದಲಾಗಿ ಮಂಗಳವಾರ ರಜೆ ನೀಡಲು ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಗಣೇಶ ಹಬ್ಬದ ಆಚರಣೆಯ ದಿನದ ಬಗ್ಗೆ ಗೊಂದಲಗಳಿವೆ. ಹಲವೆಡೆ ಸೋಮವಾರ (ಸೆ.18) ದಂದು ಹಬ್ಬ ಆಚರಿಸುತ್ತಿದ್ದರೆ, ಮತ್ತೆ ಕೆಲವೆಡೆ ಮಂಗಳವಾರ (ಸೆ.19) ದಂದು ಆಚರಿಸಲಾಗುತ್ತಿದೆ. ಸರ್ಕಾರ ನಿಗದಿ ಪಡಿಸಿದ ರಜೆಯು ಸೋಮವಾರ ಎಂದಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಹಬ್ಬ ಆಚರಿಸುವ ಕಾರಣ ಅದೇ ದಿನ ಸರ್ಕಾರಿ ರಜೆ ನೀಡಬೇಕು ಎಂದು ಕೂಗು ಕೇಳಿಬಂದಿತ್ತು. ಈ ಬಗ್ಗೆ ಜನಪ್ರತಿನಿಧಿಗಳು ಕೂಡಾ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯ ಕಾರ್ಯದರ್ಶಿ ಮತ್ತು ಜಿಲ್ಲಾಧಿಕಾರಿಯವರಿಗೆ ಸೆ.19ರಂದು ರಜೆ ನೀಡಲು ಪತ್ರ ಮೂಲಕ ತಿಳಿಸಿದ್ದರು. ಇದೀಗ ಸರ್ಕಾರದ ಅಧಿಕೃತ ಆದೇಶ ಬಂದಿದೆ.