Home latest ಕಾರ್ಕಳ : ಕಾರಿನಲ್ಲಿ ಬಂದು ಗೋ ಕಳ್ಳತನ! ಮುಂಜಾನೆ ನಡೆದ ಕೃತ್ಯ

ಕಾರ್ಕಳ : ಕಾರಿನಲ್ಲಿ ಬಂದು ಗೋ ಕಳ್ಳತನ! ಮುಂಜಾನೆ ನಡೆದ ಕೃತ್ಯ

Hindu neighbor gifts plot of land

Hindu neighbour gifts land to Muslim journalist

ಇಂದು ಬೆಳಗ್ಗಿನ ಜಾವ 2.45ರ ಹೊತ್ತಿಗೆ ಕಾರ್ಕಳ ಬಂಗ್ಲೆಗುಡ್ಡೆಯ ವಿದ್ಯಾ ಸರಸ್ವತಿ ಮಂದಿರದ ಆವರಣದಲ್ಲಿ ಮಾರಕಾಸ್ತ್ರಗಳನ್ನು ತೋರಿಸಿ ಐಷಾರಾಮಿ ಕಾರುಗಳನ್ನು ಬಳಸಿ ದನ ಕಳ್ಳತನ ಮಾಡಿದ ಘಟನೆಯೊಂದು ನಡೆದಿದೆ.

ಗೋ ಕಳ್ಳತನ ವರದಿಯಾಗಿದೆ. ಕಾನೂನು-ಸುವ್ಯವಸ್ಥೆಗೆ ಸವಾಲೆಸೆಯುವ ರೀತಿಯಲ್ಲಿ ರಾಜಾರೋಷವಾಗಿ ದನ ಕಳ್ಳತನ ಎಗ್ಗಿಲ್ಲದೆ ನಡೆಯುತ್ತಿದೆ.

ಎರಡು ದಿನಗಳ ಹಿಂದೆ ಹಾಡ ಹಗಲೇ ನಕಲಿ ನಂಬರ್ ಪ್ಲೇಟ್ ಬಳಸಿ ಓಮ್ನಿ ಕಾರಿನಲ್ಲಿ ಕೊಂಡೊಯ್ಯಲಾಗುತ್ತಿದ್ದ ಗೋ ಕಳ್ಳತನ ಕೃತ್ಯವನ್ನು ಹಿಂದೂ ಜಾಗರಣ ಕಾರ್ಯಕರ್ತರು ಪತ್ತೆ ಹಚ್ಚಿದ್ದು, ಕೂದಲೆಳೆಯ ಅಂತರದಲ್ಲಿ ದನಕಳ್ಳರ ವಾಹನ ಎಸ್ಕೇಪ್ ಆಗಿತ್ತು.

ಈ ಘಟನೆಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.