Home latest Ram Mandir Live : ಶ್ರೀರಾಮ ಪ್ರಾಣಪ್ರತಿಷ್ಠಾಪನಾ ನೇರಪ್ರಸಾರಕ್ಕೆ ನಿಷೇಧ ಹೇರಿದ ಸರಕಾರ!

Ram Mandir Live : ಶ್ರೀರಾಮ ಪ್ರಾಣಪ್ರತಿಷ್ಠಾಪನಾ ನೇರಪ್ರಸಾರಕ್ಕೆ ನಿಷೇಧ ಹೇರಿದ ಸರಕಾರ!

Government holiday

Hindu neighbor gifts plot of land

Hindu neighbour gifts land to Muslim journalist

Ram Mandir Inauguration :ಅಯೋಧ್ಯೆಯಲ್ಲಿ ಜ.22 ರಂದು ರಾಮ ಮಂದಿರ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ರಾಮಮಂದಿರ ಉದ್ಘಾಟನಾ ನೇರ ಪ್ರಸಾರವನ್ನು ವೀಕ್ಷಿಸುವುದನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಭಾನುವಾರ ಟ್ವೀಟ್ ಮೂಲಕ ಆರೋಪ ಮಾಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಕಾರ್ಯಕ್ರಮಗಳ ನೇರ ಪ್ರಸಾರವನ್ನು ವೀಕ್ಷಿಸುವುದನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ. ಇದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ಹೊರ ವ್ಯಕ್ತಪಡಿಸಿದ್ದಾರೆ.

 

ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಗಳ ನೇರ ಪ್ರಸಾರವನ್ನು  ತಮಿಳುನಾಡು ಸರ್ಕಾರ(TN Banned Ram Mandir Inauguration live ) ನಿಷೇಧ ಹೇರಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಆರೋಪಿಸಿದ್ದಾರೆ.

 

ನೇರ ಪ್ರಸಾರದ ಸಂದರ್ಭ ವಿದ್ಯುತ್ ಕಡಿತವಾಗುವ ಸಾಧ್ಯತೆಯಿದೆ ಎಂದು ಕೇಬಲ್ ಟಿವಿ ಆಪರೇಟರ್‌ಗಳಿಗೆ ತಿಳಿಸಲಾಗಿದೆಯಾಗಿದೆಯಂತೆ. ಇದು INDI ಮೈತ್ರಿಕೂಟದ ಪ್ರಮುಖ ಪಾಲುದಾರ ಡಿಎಂಕೆಯಿಂದ “ಹಿಂದೂ ವಿರೋಧಿ ನಡೆ” ಎಂದು ನಿರ್ಮಲಾ ಸೀತಾರಾಮನ್ ವಾಗ್ದಾಳಿ ನಡೆಸಿದ್ದಾರೆ. ತಮಿಳುನಾಡು ಸರ್ಕಾರ ಲೈವ್ ಟೆಲಿಕಾಸ್ಟ್ ನಿಷೇಧವನ್ನು ಸಮರ್ಥಿಸಿಕೊಳ್ಳಲು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಅಂತ ಅನಧಿಕೃತವಾಗಿ ಹೇಳಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.