Home Jobs ಕೇಂದ್ರ ಸರ್ಕಾರಿ ನೌಕರರಂತೆ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ-ಸಿ. ಎಸ್. ಷಡಕ್ಷರಿ |ಸರ್ಕಾರಿ ನೌಕರರ...

ಕೇಂದ್ರ ಸರ್ಕಾರಿ ನೌಕರರಂತೆ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ-ಸಿ. ಎಸ್. ಷಡಕ್ಷರಿ |ಸರ್ಕಾರಿ ನೌಕರರ ವೇತನ 10 ರಿಂದ 45 ಸಾವಿರ ರೂ. ವರೆಗೆ ಹೆಚ್ಚಳ

Hindu neighbor gifts plot of land

Hindu neighbour gifts land to Muslim journalist

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು,ವೇತನ ಹೆಚ್ಚಳವಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 2022ಕ್ಕೆ 7ನೇ ವೇತನ ಆಯೋಗ ರಚನೆಯಾಗಲಿದ್ದು, ರಾಜ್ಯ ಸರ್ಕಾರಿ ನೌಕರರ ವೇತನ ಕನಿಷ್ಠ 10 ರಿಂದ 45 ಸಾವಿರ ರೂ.ವರೆಗೆ ಹೆಚ್ಚಳವಾಗಲಿದೆ ಎಂದು ತಿಳಿಸಿದ್ದಾರೆ.

ಸರ್ಕಾರ ಫೆಬ್ರವರಿ ಬಜೆಟ್ ನಲ್ಲಿ ವೇತನ ಆಯೋಗದ ಬಗ್ಗೆ ಘೋಷಣೆ ಮಾಡಲಿದೆ. ಡಿ ಗ್ರೂಪ್ ನೌಕರರು ಸೇರಿದಂತೆ ಎಲ್ಲ ಸರ್ಕಾರಿ ನೌಕರರಿಗೆ ವೇತನ ಆಯೋಗದಿಂದ ಅನುಕೂಲವಾಗಲಿದೆ.ಕೇಂದ್ರ ಸರ್ಕಾರಿ ನೌಕರರಿಗೆ ಸಮನಾದ ವೇತನ ಸೌಲಭ್ಯಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ಜಾರಿಗೊಳಿಸಬೇಕು. ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಬೇಕು. ಶಿಕ್ಷಕರ ಸಮಸ್ಯೆ ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಂಸದರು, ಶಾಸಕರಿಗೆ ಮನವಿ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.