

Gruha lakshmi Scheme: ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಮನೆ ಯಜಮಾನಿಗೆ 2000 ರೂಪಾಯಿ ನೆರವು ನೀಡುವ ‘ಗೃಹಲಕ್ಷ್ಮಿ’ ಯೋಜನೆಗೆ (Gruha lakshmi Scheme) ಈಗಾಗಲೇ ನೋಂದಣಿ ಆರಂಭವಾಗಿದೆ. ಪ್ರತೀ ಮನೆಯ ಯಜಮಾನಿಯರು ಮುಗಿಬಿದ್ದು ಅರ್ಜಿ ಹಾಕುತ್ತಿದ್ದಾರೆ. ಇದೀಗ ಈ ಯೋಜನೆಯ ಬಗ್ಗೆ ಫ್ರೆಶ್ ಅಪ್ಡೇಟ್ ಸಿಕ್ಕಿದೆ. ಹೌದು, ಮುಖ್ಯಮಂತ್ರಿ ಅವರು ಈ ಯೋಜನೆ ಬಗ್ಗೆ ಬಿಗ್ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaigh) ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ. “ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 24 ರಂದು ಚಾಲನೆ ನೀಡಲಿದ್ದೇವೆ. ರಾಜ್ಯದ 1.28 ಕೋಟಿ ಕುಟುಂಬಗಳಿಗೆ 2000 ರೂ. ಗಳನ್ನು ಈ ಯೋಜನೆಯಡಿ ನೀಡಲಾಗುವುದು. ನಾವು ಜನರ ಕೈಗೆ ದುಡ್ಡು ನೀಡುತ್ತದ್ದೇವೆ. ಜನರಲ್ಲಿ ಕೊಂಡುಕೊಳ್ಳುವ ಶಕ್ತಿ ಹೆಚ್ಚಾಗುತ್ತದೆ. ತನ್ಮೂಲಕ ರಾಜ್ಯದ ಜಿಡಿಪಿ, ಆರ್ಥಿಕ ಚಟುವಟಿಕೆ ಜಾಸ್ತಿಯಾಗುತ್ತದೆ. ಐದು ಗ್ಯಾರಂಟಿಗಳಿಂದ ಒಬ್ಬರಿಗೆ 4 ರಿಂದ 5 ಸಾವಿರ ರೂ. ದೊರೆಯಲಿದ್ದು, ಈ ರೀತಿ 48 ರಿಂದ 60 ಸಾವಿರ ರೂಪಾಯಿ ವಾರ್ಷಿಕವಾಗಿ ಜನರಿಗೆ ಲಭಿಸಲಿದೆ” ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಈಗಾಗಲೇ ಶಕ್ತಿ ಯೋಜನೆ (Shakti scheme) ಜಾರಿಗೆ ತಂದು ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗಿದೆ. ಇದೀಗ ಗೃಹಲಕ್ಷೀ ಯೋಜನೆಯಿಂದ ಮಹಿಳೆಯರಿಗೆ ಆರ್ಥಿಕವಾಗಿ ಬೆಂಬಲ ಸಿಗಲಿದೆ. ಆರ್ಥಿಕ ಸಮಸ್ಯೆಗೆ ಸಹಕಾರಿಯಾಗಲಿದೆ. ಆಗಸ್ಟ್ 25 ರಂದು ವರಮಹಾಲಕ್ಷ್ಮಿ ಹಬ್ಬ ಇದೆ. ಅದರ ಹಿಂದಿನ ದಿನ ಅಂದರೆ ಆಗಸ್ಟ್ 24 ರಂದು ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು. ಮಹಿಳೆಯರ ಖಾತೆಗೆ 2 ಸಾವಿರ ರೂ. ಜಮಾ ಮಾಡಲಾಗುವುದು.
ಇದನ್ನೂ ಓದಿ: Uttar Pradesh: ಅಪ್ರಾಪ್ತ ಬಾಲಕರ ಗುದದ್ವಾರಕ್ಕೆ ಹಸಿ ಮೆಣಸಿನಕಾಯಿ ತುರುಕಿ ವಿಕೃತಿ !













