Home Interesting 16 ವರ್ಷದ ಬಾಲಕಿಯ ಮೇಲೆ ಮೂವರಿಂದ ಗುಂಡಿನ ದಾಳಿ! | ಬಂಧನವಾದ ಇಬ್ಬರು ಆರೋಪಿಗಳು ಬಾಯಿಬಿಟ್ಟರು...

16 ವರ್ಷದ ಬಾಲಕಿಯ ಮೇಲೆ ಮೂವರಿಂದ ಗುಂಡಿನ ದಾಳಿ! | ಬಂಧನವಾದ ಇಬ್ಬರು ಆರೋಪಿಗಳು ಬಾಯಿಬಿಟ್ಟರು ಕೃತ್ಯದ ಹಿಂದಿನ ಸತ್ಯ!

Hindu neighbor gifts plot of land

Hindu neighbour gifts land to Muslim journalist

ಸಾಮಾಜಿಕ ಮಾಧ್ಯಮದಲ್ಲಿ ಸ್ನೇಹ ಬೆಳೆಸಿದ್ದಾಕೆ ಸಂದೇಶ ಕಳಿಸುವುದನ್ನು ನಿಲ್ಲಿಸಿದ್ದಕ್ಕೆ ಕೋಪಗೊಂಡ ಯುವಕನೋರ್ವ ತನ್ನ ಸ್ನೇಹಿತರೊಂದಿಗೆ ಸೇರಿ ಆಕೆಗೆ ಗುಂಡು ಹಾರಿಸಿದ್ದು, ಇದೀಗ ಆರೋಪಿಗಳು ಪೊಲೀಸ್ ವಶವಾಗಿರುವ ಘಟನೆ ನಡೆದಿದೆ.

ದೆಹಲಿಯಲ್ಲಿ 16 ವರ್ಷದ ಬಾಲಕಿಯ ಮೇಲೆ ಮೂವರು ವ್ಯಕ್ತಿಗಳು ಗುಂಡು ಹಾರಿಸಿದ್ದು, ಆಕೆಯ ಮೇಲೆ ದಾಳಿ ಮಾಡಿದವರ ಪೈಕಿ ಇಬ್ಬರನ್ನು ಎರಡು ದಿನಗಳ ನಂತರ ಪೊಲೀಸರು ಬಂಧಿಸಿದ್ದಾರೆ.

ಅರ್ಮಾನ್ ಅಲಿ ಎಂಬಾತ ಕಳೆದ ಎರಡು ವರ್ಷಗಳಿಂದ ಸಾಮಾಜಿಕ ಮಾಧ್ಯಮದ ಮೂಲಕ ಹುಡುಗಿಯೊಂದಿಗೆ ಸಂಪರ್ಕದಲ್ಲಿದ್ದನು. ಆರು ತಿಂಗಳ ಹಿಂದೆ ಹುಡುಗಿ ತನ್ನ ಸಂದೇಶಗಳಿಗೆ ಪ್ರತಿಕ್ರಿಯಿಸುವುದನ್ನು ನಿಲ್ಲಿಸಿದ ನಂತರ ಆತ ದಾಳಿಗೆ ಸಂಚು ರೂಪಿಸಿದ್ದಾನೆ.

ಹನ್ನೊಂದನೇ ತರಗತಿ ಓದುತ್ತಿರುವ 16 ವರ್ಷದ ಬಾಲಕಿ ಗುರುವಾರ ದಕ್ಷಿಣ ದೆಹಲಿಯ ಸಂಗಮ್ ವಿಹಾರ್ ಪ್ರದೇಶದಲ್ಲಿ ಶಾಲೆಯಿಂದ ಮನೆಗೆ ಹೋಗುತ್ತಿದ್ದಾಗ ಆಕೆಯ ಮೇಲೆ ಗುಂಡು ಹಾರಿಸಲಾಗಿತ್ತು. ಸಂತ್ರಸ್ತೆಗೆ ಭುಜದ ಮೇಲೆ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಳು. ಆರೋಪಿಗಳು ಬಾಲಕಿಯ ಮೇಲೆ ಹಿಂದಿನಿಂದ ಗುಂಡು ಹಾರಿಸಿ ಓಡಿ ಹೋಗಿದ್ದಾರೆ. ಅವರ ವಿರುದ್ಧ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಲಾಗಿದ್ದು, ಇದೀಗ ಪೊಲೀಸ್ ವಶವಾಗಿದ್ದಾರೆ.

ಬಾಲಕಿ ತನ್ನೊಂದಿಗೆ ಮಾತನಾಡುವುದನ್ನು ನಿಲ್ಲಿಸಿದ ನಂತರ ಅರ್ಮಾನ್ ಅಲಿ ಎಂಬಾತ ದಾಳಿ ಮಾಡಲು ಯೋಜಿಸಿದ್ದಾಗಿ ಬಾಬಿ ಮತ್ತು ಪವನ್ ಎಂಬ ಇಬ್ಬರು ವ್ಯಕ್ತಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಪ್ರಮುಖ ಆರೋಪಿ ಅರ್ಮಾನ್ ಅಲಿ ಪರಾರಿಯಾಗಿದ್ದು, ಆತನನ್ನು ಪತ್ತೆಹಚ್ಚಲು ಪೊಲೀಸರು ಮಾಹಿತಿದಾರರ ಸಹಾಯವನ್ನು ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.