ಸೋಮವಾರ, 26 ಅಕ್ಟೋಬರ್ 2026
Trending

T20 World Cup : ಟಿ20 ವಿಶ್ವಕಪ್​ ತಂಡದಿಂದ ಹರ್ಷಿತ್ ರಾಣಾ ಹೊರಕ್ಕೆ !!

T20 World Cup :ವಿಶ್ವಕಪ್ ಆರಂಭಕ್ಕೆ ಒಂದು ದಿನ ಮಾತ್ರ ಬಾಕಿ ಇದೆ. ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿಯುವ ಸಲುವಾಗಿ ಸಕಲ ತಯಾರಿಗಳನ್ನು ಮಾಡಿಕೊಂಡಿದೆ. ಆದರೆ ವಿಶ್ವಕಪ್ ಆರಂಭಕ್ಕೆ ಒಂದು ದಿನ ಇರುವಾಗ ಸೂರ್ಯಕುಮಾರ್ ಪಡೆಗೆ ದೊಡ್ಡ ಆಘಾತ ಎದುರಾಗಿದ್ದು, ಭಾರತ ತಂಡದ ವೇಗಿ ಹರ್ಷಿತ್ ರಾಣಾ ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. 

Sponsored

ಹೌದು, ಕಳೆದೊಂದು ವರ್ಷದಿಂದ ಭಾರತದ ಬೌಲಿಂಗ್ ವಿಭಾಗದಲ್ಲಿ ಪ್ರಮುಖ ವೇಗಿಯಾಗಿ ಕಾಣಿಸಿಕೊಂಡಿರುವ ಯುವ ವೇಗಿ ಹರ್ಷಿತ್ ರಾಣಾ ಗಾಯದ ಕಾರಣದಿಂದಾಗಿ ಪಂದ್ಯಾವಳಿಯಿಂದ ಹೊರಬಿದಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದ ಸಮಯದಲ್ಲಿ ಹರ್ಷಿತ್ ರಾಣಾ ಗಾಯಗೊಂಡಿದ್ದರು. ಇದರಿಂದಾಗಿ ಅವರು ಪಂದ್ಯವನ್ನು ಮಧ್ಯದಲ್ಲೇ ತೊರೆದು ಪೆವಿಲಿಯನ್ ಸೇರಿಕೊಂಡಿದ್ದರು. ಹೀಗಾಗಿ ಮೊಣಕಾಲಿನ ಗಾಯಕ್ಕೆ ಒಳಗಾಗಿ ತಂಡದಿಂದ ಹೊರಬಿದ್ದಿರುವ ಹರ್ಷಿತ್ ರಾಣಾ ಬದಲು ಮೊಹಮ್ಮದ್ ಸಿರಾಜ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಬಿಸಿಸಿಐ ಮೂಲಗಳು ಮಾಹಿತಿ ನೀಡಿವೆ.

Advertisement
Advertisement

ಇದಕ್ಕೂ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ನಾಯಕ ಸೂರ್ಯಕುಮಾರ್ ಯಾದವ್, ‘ಹರ್ಷಿತ್ ರಾಣಾ ಅವರು ಸಂಪೂರ್ಣವಾಗಿ ಫಿಟ್ ಆಗಿಲ್ಲ. ಅವರು, ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಆದರೆ, ಅವರನ್ನು ತಂಡದಿಂದ ಸಂಪೂರ್ಣವಾಗಿ ಹೊರಗಿಟ್ಟಿಲ್ಲ’ ಎಂದು ತಿಳಿಸಿದ್ದರು.

Advertisement