Home latest Ration Card Holder: ಪಡಿತರ ಚೀಟಿದಾರರಿಗೆ ಮಹತ್ವದ ಸುದ್ದಿ- ರೇಷನ್ ಕಾರ್ಡ್ ಅಪ್ಡೇಟ್ ಮಾಡಲು ಕೊನೆಗೂ...

Ration Card Holder: ಪಡಿತರ ಚೀಟಿದಾರರಿಗೆ ಮಹತ್ವದ ಸುದ್ದಿ- ರೇಷನ್ ಕಾರ್ಡ್ ಅಪ್ಡೇಟ್ ಮಾಡಲು ಕೊನೆಗೂ ಡೆಡ್ ಲೈನ್ ಫಿಕ್ಸ್- ಈ ದಿನದೊಳಗೆ ಮಾಡದಿದ್ದರೆ ನಿಮಗಿಲ್ಲ ‘ಗ್ಯಾರಂಟಿ’

Ration Card Holder

Hindu neighbor gifts plot of land

Hindu neighbour gifts land to Muslim journalist

Ration Card Holder: BPL ರೇಷನ್ ಕಾರ್ಡ್ (Ration Card)ಅಥವಾ ಪಡಿತರ ಚೀಟಿಯನ್ನು ಹೊಂದಿರುವ ಬಳಕೆದಾರರಿಗೆ ಮುಖ್ಯ ಮಾಹಿತಿ ಇಲ್ಲಿದೆ ನೋಡಿ. ಬಡವರು ಹಾಗೂ ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಸರಕಾರದಿಂದ ಪಡಿತರ ಚೀಟಿ (Ration Card)ವ್ಯವಸ್ಥೆ ಮಾಡಲಾಗಿದೆ. ಇದೀಗ, ಪಡಿತರ ಚೀಟಿ ಹೊಂದಿರುವವರಿಗೆ(Ration Card Holder) ಗುಡ್ ನ್ಯೂಸ್(Good News)ಹೊರ ಬಿದ್ದಿದೆ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುವ ನಿಟ್ಟಿನಲ್ಲಿ ಕೆಲವರು ನಕಲಿ ದಾಖಲೆಗಳನ್ನು ನೀಡಿ ಹೊಸ ಬಿಪಿಎಲ್ ಕಾರ್ಡ್ ಗೆ ಅರ್ಜಿ (BPL Card Application) ಸಲ್ಲಿಸುತ್ತಿದ್ದಾರೆ. ಈ ರೀತಿ ಮೋಸ ಮಾಡುವವರ ಪತ್ತೆಗಾಗಿ ಶೀಘ್ರದಲ್ಲೇ ಆಹಾರ ಇಲಾಖೆ ಹೊಸ ಮಾರ್ಗಸೂಚಿ (New Rules) ಬಿಡುಗಡೆ ಮಾಡಲಿದ್ದು, ಅಂಥವರ ಕಾರ್ಡನ್ನು ರದ್ದು ಮಾಡಲಾಗುತ್ತದೆ. ಇದರ ನಡುವೆಯೇ ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ.

ಪಡಿತರ ಚೀಟಿಯಲ್ಲಿರುವ ಫಲಾನುಭವಿಗಳ ಮಾಹಿತಿ ತಿದ್ದುಪಡಿ ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ಸೆಪ್ಟೆಂಬರ್ 14ರ ವರೆಗೆ ಅನುವು ಮಾಡಿಕೊಡಲಾಗಿದೆ.ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಚೀಟಿ ಫಲಾನುಭವಿಗಳ ಮಾಹಿತಿ ತಿದ್ದುಪಡಿ, ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9 ರಿಂದ 14 ರವರೆಗೆ ಕಾಲಾವಕಾಶ ನೀಡಲಾಗಿದೆ.

ಪಡಿತರ ಚೀಟಿ ತಿದ್ದುಪಡಿಗೆ ಭರಪೂರ ಅರ್ಜಿ ಸಲ್ಲಿಕೆಯಾಗುತ್ತಿರುವ ಕಾರಣದಿಂದ ಆಹಾರ ಇಲಾಖೆಯ ಸರ್ವರ್‌ ನಲ್ಲಿಸಮಸ್ಯೆ ಕಾಣಿಸಿಕೊಂಡಿದೆ.1 ಗಂಟೆಯಲ್ಲಿ ಸುಮಾರು 500ಕ್ಕೂ ಅಧಿಕ ಅರ್ಜಿ ಸಲ್ಲಿಕೆಯಾಗುತ್ತಿರುವ ಕಾರಣದಿಂದ ಸರ್ವ‌ರ್ ಸಮಸ್ಯೆ ಎದುರಾಗಿತ್ತು. ಇದರಿಂದಾಗಿ ಜನರು ಪಡಿತರ ಚೀಟಿ ತಿದ್ದುಪಡಿಗೆ ವಿವಿಧ ಕೇಂದ್ರಗಳನ್ನು ಸಂಪರ್ಕಿಸಿದರೂ ತಿದ್ದುಪಡಿ ಆಗುತ್ತಿರಲಿಲ್ಲ. ಈ ಸಮಸ್ಯೆಯನ್ನು ಗಮನಿಸಿದ ಆಹಾರ ಇಲಾಖೆ ಸರ್ವರ್ ನಿಭಾಯಿಸಲು ಇದೀಗ ಜಿಲ್ಲಾವಾರು ದಿನಾಂಕವನ್ನು ನಿಗದಿಪಡಿಸಿದೆ.

ಸೆಪ್ಟೆಂಬರ್ 6 ರಿಂದ 8 ರವರೆಗೆ ಬಳ್ಳಾರಿ, ಚಿಕ್ಕಬಳ್ಳಾಪುರ, ಬೀದರ್, ಚಿತ್ರದುರ್ಗ, ದಾವಣಗೆರೆ, ಕೋಲಾರ, ಕಲಬುರಗಿ, ರಾಮನಗರ, ರಾಯಚೂರು, ಯಾದಗಿರಿ, ವಿಜಯನಗರ, ತುಮಕೂರು, ಶಿವಮೊಗ್ಗ ಜಿಲ್ಲೆಯ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.ಸೆಪ್ಟೆಂಬರ್ 12ರ ರಿಂದ 14ರವರೆಗೆ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಬಾಗಲಕೋಟೆ, ಚಾಮರಾಜನಗರ, ಬೆಳಗಾವಿ, ಕೊಡಗು, ಹಾವೇರಿ, ಹಾಸನ, ಗದಗ, ಮೈಸೂರು, ಮಂಡ್ಯ, ಉತ್ತರ ಕನ್ನಡ, ಉಡುಪಿ, ವಿಜಯಪುರ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಫಲಾನುಭವಿಗಳಿಗೆ ಮಾಹಿತಿ ತಿದ್ದುಪಡಿ, ಹೆಸರು ಸೇರ್ಪಡೆ ಮುಂತಾದ ತಿದ್ದುಪಡಿ ಕಾರ್ಯಗಳಿಗೆ ಸೆಪ್ಟೆಂಬರ್ 9 ರಿಂದ 11 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ:Hospete: TET ಪರೀಕ್ಷೆ ಬರೆಯಲು ಬುರ್ಖಾ ಧರಿಸಿ ಬಂದ ಪರೀಕ್ಷಾರ್ಥಿಗಳು – ನಂತರ ಆದದ್ದೇನು?