Home latest America Shootout: ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಯ ಬರ್ಬರ ಹತ್ಯೆ!

America Shootout: ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಯ ಬರ್ಬರ ಹತ್ಯೆ!

America shootout
Image source: Telegraph India

Hindu neighbor gifts plot of land

Hindu neighbour gifts land to Muslim journalist

America shootout: ಅಮೆರಿಕದಲ್ಲಿ (America shootout) ದರೋಡೆಕೋರರು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದಾನೆ. ಅಮೆರಿಕದಲ್ಲಿ ಇತ್ತೀಚೆಗೆ ಶೂಟೌಟ್‌ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಾ ಇದೆ. ಭಾರತೀಯ ಮೂಲದ ವಿದ್ಯಾರ್ಥಿಯಾದ ಚಾಕೋ (21)ಈ ದಾಳಿಕೋರರ ಗುಂಡಿನ ದಾಳಿಗೆ ಸಿಲುಕಿ ಮೃತಪಟ್ಟಿದ್ದಾನೆ. ದರೋಡೆಕೋರರು ಚಾಕೋರನ್ನು ಅಡ್ಡಗಟ್ಟಿ ಹಣ ಸುಲಿಗೆ ಮಾಡಲು ಯತ್ನಿಸಿದ್ದರು. ಆದರೆ ಇದಕ್ಕೆ ವಿದ್ಯಾರ್ಥಿ ಒಪ್ಪದ ಕಾರಣ ಇಬ್ಬರು ದರೋಡೆಕೋರರು ಗುಂಡಿನ ದಾಳಿ ನಡೆಸಿದ್ದು, ಪರಿಣಾಮವಾಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಈ ಘಟನೆ ಫಿಲಡೆಲ್ಫಿಯಾದಲ್ಲಿ (Philadephia) ನಡೆದಿದೆ.

ಭಾರತೀಯ ಮೂಲದ ವಿದ್ಯಾರ್ಥಿಯ ಪೋಷಕರು ಕೇರಳದ ಕೊಲ್ಲಂ ಜಿಲ್ಲೆಯ ನಿವಾಸಿಗಳು ಎಂದು ವರದಿಯಾಗಿದೆ. ಇವರು ಸುಮಾರು ಮೂವತ್ತು ವರ್ಷಗಳ ಹಿಂದೆ ಕೇರಳದಿಂದ ಅಮೆರಿಕಾಕ್ಕೆ ಬಂದು ನೆಲೆಸಿದ್ದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Rashmika mandanna: ರಶ್ಮಿಕಾಳ ಮೊದಲ ಸಿನಿಮಾ ‘ಕಿರಿಕ್ ಪಾರ್ಟಿ’ ಅಲ್ಲ!! ಮೊದಲೇ ಬೇರೆ ಸಿನಿಮಾದಲ್ಲಿ ನಟಿಸಿದ್ದ ರಶ್ಮಿಕಾ ಮಂದಣ್ಣ!! ಅದ್ಯಾವುದು ಗೊತ್ತಾ?