# ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

- Link: https://hosakannada.com/latest/kannada-rajyotsava-celebration-at-kumbhashree-english-medium-school-college/
- Published: 2026-11-03T07:26:06+00:00
- Author: ಹೊಸಕನ್ನಡ ನ್ಯೂಸ್

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜು, ವೇಣೂರು ಇಲ್ಲಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವ
ಕಾರ್ಯಕ್ರಮವು ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಗಿರೀಶ್ ಕೆ. ಎಚ್. ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ
ನಡೆಯಿತು.

Sponsored

ಸಂಸ್ಥೆಯ ಸಂಚಾಲಕರಾದ ಶ್ರೀ ಅಶ್ವಿತ್ ಕುಲಾಲ್ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಪ್ರೌಢಶಾಲಾ
ವಿಭಾಗದ ಕನ್ನಡ ಶಿಕ್ಷಕರು ಕನ್ನಡ ರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು.

Advertisement

Advertisement

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಶ್ರೀನಿವಾಸ ನಾಯ್ಕ್ , ಪ್ರೌಢಶಾಲಾ ವಿಭಾಗದ 
ಮುಖ್ಯ ಶಿಕ್ಷಕಿಯಾದ ಶ್ರೀಮತಿ ಮಮತಾ ಶಾಂತಿ, ಶ್ರೀಮತಿ ಶೋಭಾ ಎಲ್. ಎನ್. ಹಾಗೂ ಎಲ್ಲಾ ಉಪನ್ಯಾಸಕರು,
ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರೌಢಶಾಲಾ ವಿಭಾಗದ ಶಿಕ್ಷಕಿಯಾದ ಶ್ರೀಮತಿ ಸುಚಿತ್ರ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ
ಶೈಕ್ಷಣಿಕ ಸಲಹೆಗಾರರಾದ ಶ್ರೀ ಮನೋಜ್ ಅವರು ಸ್ವಾಗತಿಸಿದರು. ಪ್ರಾಥಮಿಕ ವಿಭಾಗದ ಶಿಕ್ಷಕಿಯಾದ ಶ್ರೀಮತಿ
ಭವಾನಿ ದಿವ್ಯ ಅವರು ವಂದಿಸಿದರು.

Advertisement
