Home Karnataka State Politics Updates Karadi Sanganna : ಬಿಜೆಪಿಯ ಇನ್ನೊಂದು ಹಿರಿಯ ವಿಕೆಟ್ ಪತನ – ಸಂಸದ ಸ್ಥಾನಕ್ಕೆ ರಾಜೀನಾಮೆಗೆ...

Karadi Sanganna : ಬಿಜೆಪಿಯ ಇನ್ನೊಂದು ಹಿರಿಯ ವಿಕೆಟ್ ಪತನ – ಸಂಸದ ಸ್ಥಾನಕ್ಕೆ ರಾಜೀನಾಮೆಗೆ ಮುಂದಾದ ಸಂಗಣ್ಣ ಕರಡಿ

karadi sanganna

Hindu neighbor gifts plot of land

Hindu neighbour gifts land to Muslim journalist

Karadi Sanganna : ಕೊಪ್ಪಳ (Koppal) ಕ್ಷೇತ್ರದ ಬಿಜೆಪಿ (BJP) ಟಿಕೆಟ್ ಆಕಾಂಕ್ಷಿಯಾಗಿದ್ದ ಕರಡಿ ಸಂಗಣ್ಣ ಅವರು ಟಿಕೆಟ್ ಸಿಗದೇ ತೀವ್ರ ಅಸಮಧಾನಗೊಂಡಿದ್ದು, ಇದೀಗ ಪಕ್ಷ ತೊರೆದು ಜೆಡಿಎಸ್ (JDS) ಸೇರ್ಪಡೆಗೆ ತಯಾರಿ ನಡೆಸಿದ್ದಾರೆ. ಸದ್ಯ ಕರಡಿ ಸಂಗಣ್ಣ (Karadi Sanganna) ಸಂಸದ ಸ್ಥಾನಕ್ಕೂ ರಾಜೀನಾಮೆ ಘೋಷಿಸಿದ್ದಾರೆ.

ಮಾಹಿತಿ ಪ್ರಕಾರ, ಸಂಸದರಿಗೆ ಟಿಕೆಟ್ ಇಲ್ಲ ಎಂದು ಹೇಳಿದ್ದ ಪಕ್ಷದ ವರಿಷ್ಠರ (BJP high command) ಬಳಿ ತಮ್ಮ ಪುತ್ರ ಗವಿಸಿದ್ದಪ್ಪ ಕರಡಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು.

ಆದರೆ ಪುತ್ರನಿಗೂ ಟಿಕೆಟ್ ನಿರಾಕರಿಸಿದ ಹಿನ್ನಲೆಯಲ್ಲಿ ಅಸಮಧಾನಗೊಂಡಿರುವ ಸಂಗಣ್ಣ ಭಾನುವಾರ ಬೆಳಿಗ್ಗೆ 11 ಗಂಟೆಗೆ ಬೆಂಬಲಿಗರ ಸಭೆ ಕರೆದಿದ್ದಾರೆ. ಸಭೆ ಬಳಿಕ ಮುಂದಿನ ನಿರ್ಧಾರವನ್ನು ಅಧಿಕೃತವಾಗಿ ತಿಳಿಸಲಿದ್ದಾರೆ.

ಸಭೆಯ ಬಳಿಕ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿರುವ ಸಂಗಣ್ಣ, ಸೋಮವಾರ ಲೋಕಸಭಾ ಸ್ಪೀಕರ್ ಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. ಏ.19 ರಂದು ಜೆಡಿಎಸ್‍ನಿಂದ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ ಎಂಬ ಮಾಹಿತಿ ಇದೆ.