Home latest Siddaramaiah: ಮಹದೇಶ್ವರ ಬೆಟ್ಟದಲ್ಲಿ ಎಣ್ಣೆ ಪಾರ್ಟಿ ?! ಸಿಎಂ ಸಿದ್ದು ಹೇಳಿದ್ದೇನು?!

Siddaramaiah: ಮಹದೇಶ್ವರ ಬೆಟ್ಟದಲ್ಲಿ ಎಣ್ಣೆ ಪಾರ್ಟಿ ?! ಸಿಎಂ ಸಿದ್ದು ಹೇಳಿದ್ದೇನು?!

Male mahadeshwara hills

Hindu neighbor gifts plot of land

Hindu neighbour gifts land to Muslim journalist

Male mahadeshwara hills : ಮಹದೇಶ್ವರ ಬೆಟ್ಟದಲ್ಲಿ (Male Mahadeshwara Hills) ಮದ್ಯಪಾನ ನಿಷೇಧಿಸಲಾಗಿದೆ. ಆದರೂ ಇಲ್ಲಿ ಕುಡಿಯುವವರ ಸಂಖ್ಯೆ ಹೆಚ್ಚಾಗಿದೆ. ಇದೀಗ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾತನಾಡಿದ್ದಾರೆ. ಅಷ್ಟಕ್ಕೂ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ?

ಚಾಮರಾಜನಗರದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ ಸಿದ್ದರಾಮಯ್ಯ, ಮಹದೇಶ್ವರ ಬೆಟ್ಟದ ಬಳಿ ಯಾವುದೇ ಮದ್ಯದಂಗಡಿ ಇಲ್ಲ. ಆದರೂ ಅಲ್ಲಿ ಮದ್ಯಪಾನ ಮಾಡುತ್ತಿದ್ದಾರೆ. ಇದು ಹೇಗೆ ಸಾಧ್ಯ? ಇಲ್ಲಿ ಮದ್ಯ ಹೇಗೆ ಸಿಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಈ ವೇಳೆ ಮಾಹಿತಿ ನೀಡಿದ ಅಬಕಾರಿ ಡಿಸಿ, ಪ್ರಕರಣ ದಾಖಲಿಸಿದ್ದೇವೆ ಎಂದು ಉತ್ತರಿಸಿದರು. ಇದರಿಂದ ಕೋಪಗೊಂಡ ಸಿದ್ದರಾಮಯ್ಯ, ಪ್ರಕರಣ ದಾಖಲಿಸಿದರೆ ಏನು ಪ್ರಯೋಜನವಾಗುತ್ತದೆ? ಎಲ್ಲದಕ್ಕು ಕಡಿವಾಣ ಹಾಕಬೇಕು. ಮಹದೇಶ್ವರ ಬೆಟ್ಟದಲ್ಲಿ ಯಾರೂ ಮದ್ಯಪಾನ ಮಾಡಬಾರದು.
ಇನ್ನು ಇಂತಹ ಪ್ರಕರಣಗಳು ಕಂಡು ಬಂದರೆ ಪೊಲೀಸರು ನಿಮ್ಮ ಮೇಲೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: Siddaramaiah: ಕಾವೇರಿ ನೀರು ವಿಚಾರವಾಗಿ ಕೊನೆಗೂ ಮಹತ್ವದ ನಿರ್ಧಾರ ಕೈಗೊಂಡ ಸರ್ಕಾರ !! ಸಿಎಂ ಸಿದ್ದು ಹೇಳಿದ್ದೇನು ?!