Home latest Govt Schools: ಮಹಿಳೆಯರಿಗೆ ಬಿಗ್ ಶಾಕ್- ಫ್ರೀ ಬಸ್ ಕುರಿತು ಸರ್ಕಾರಕ್ಕೆ ಖಡಕ್ ಸಂದೇಶ ರವಾನಿಸಿದ...

Govt Schools: ಮಹಿಳೆಯರಿಗೆ ಬಿಗ್ ಶಾಕ್- ಫ್ರೀ ಬಸ್ ಕುರಿತು ಸರ್ಕಾರಕ್ಕೆ ಖಡಕ್ ಸಂದೇಶ ರವಾನಿಸಿದ ಹೈಕೋರ್ಟ್

Govt Schools

Hindu neighbor gifts plot of land

Hindu neighbour gifts land to Muslim journalist

Govt Schools: ಇತ್ತೀಚೆಗೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಅವ್ಯವಸ್ಥೆಯಿಂದಾಗಿ ಖಾಸಗಿ ಶಾಲೆಗಳು ಹೆಚ್ಚುತ್ತಿವೆ. ಇದರಿಂದಾಗಿ ಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಈ ಬಗ್ಗೆ ಹೈಕೋರ್ಟ್‌ ಆಕ್ರೋಶ ವ್ಯಕ್ತಪಡಿಸಿದೆ.

ಸಮಾಜದಲ್ಲಿ ಶಿಕ್ಷಣದಿಂದ ಮಾತ್ರ ಸಮಾನತೆ ಸಾಧ್ಯ. ನೀವು ಉಚಿತ ಬಸ್‌ ಸೇವೆ (Free Bus Service) ನೀಡುತ್ತಿದ್ದೀರಿ, ನಾವು ಅದನ್ನು ವಿರೋಧಿಸುವುದಿಲ್ಲ. ಆದರೆ, ಶಿಕ್ಷಣ ಅತ್ಯಗತ್ಯ ಎನ್ನುವುದು ತಿಳಿದಿರಬೇಕು; ಹೀಗೆಂದು ಸರ್ಕಾರಿ ಶಾಲೆಗಳ (Govt Schools) ಅವ್ಯವಸ್ಥೆಯ ವಿಚಾರದಲ್ಲಿ ಸರ್ಕಾರಕ್ಕೆ ರಾಜ್ಯ ಹೈಕೋರ್ಟ್‌ (Karnataka High court) ಖಡಕ್ ಆಗಿ ಹೇಳಿದೆ.

ಇದರ ಜತೆಗೆ ಸರ್ಕಾರಿ ಶಾಲೆಗಳಲ್ಲಿ (Govt. Schools) ಶೌಚಾಲಯ ಮತ್ತು ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ರಾಜ್ಯ ಸರ್ಕಾರ ಮುತುವರ್ಜಿ ತೋರದೇ ಇರುವುದು ಖಾಸಗಿ ಶಿಕ್ಷಣ ಸಂಸ್ಥೆಗಳ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಹೈಕೋರ್ಟ್‌ ಸೋಮವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ 2009 ಮತ್ತು ಕರ್ನಾಟಕ ಉಚಿತ ಮತ್ತು ಕಡ್ಡಾಯ ಶಿಕ್ಷಣ ಮಕ್ಕಳ ಹಕ್ಕು ನಿಯಮಗಳ ನಿಬಂಧನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸದಿರುವುದರಿಂದ ಅಪಾರ ಸಂಖ್ಯೆಯಲ್ಲಿ ಮಕ್ಕಳು ಶಾಲೆಯಿಂದ ಹೊರಗಿದ್ದಾರೆ, ಇನ್ನು ಸಾಕಷ್ಟು ಸೌಲಭ್ಯಗಳು ಇಲ್ಲದೇ ಇರುವುದರಿಂದ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಹಣಕಾಸಿನ ಸಮಸ್ಯೆ ಎದುರಿಸುತ್ತಿರುವ ಪೋಷಕರೂ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸದೇ ವಿಧಿ ಇಲ್ಲವಾಗಿದೆ. ಆ ಮೂಲಕ ಸಂವಿಧಾನದಲ್ಲಿ ಪ್ರಾಥಮಿಕ ಶಿಕ್ಷಣ ಕಡ್ಡಾಯಗೊಳಿಸಿರುವುದರ ಹಿಂದಿನ ಉದ್ದೇಶಕ್ಕೆ ಸೋಲಾಗುತ್ತಿದೆ ಎಂಬ ಅಮಿಕಸ್‌ ಕ್ಯೂರಿ ಮತ್ತು ಅರ್ಜಿದಾರರ ಪರ ವಕೀಲರ ವಾದಕ್ಕೆ ಪೀಠ ಸಹಮತ ವ್ಯಕ್ತಪಡಿಸಿದೆ.

ಮಾಹಿತಿ ಪ್ರಕಾರ, ರಾಜ್ಯದ 464 ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳು ಇಲ್ಲ. 87 ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. 87 ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂದು ಪ್ರಕರಣದಲ್ಲಿ ಅಮಿಕಸ್‌ ಕ್ಯೂರಿಯಾಗಿರುವ ಹಿರಿಯ ವಕೀಲ ಕೆ ಎನ್‌ ಫಣೀಂದ್ರ ಅವರು ಕೋರ್ಟ್‌ಗೆ ತಿಳಿಸಿದರು.

ಇದೀಗ ಹೈಕೋರ್ಟ್‌, ಸರ್ಕಾರಕ್ಕೆ ಗಂಭೀರ ಪ್ರಶ್ನೆಗಳನ್ನು ಕೇಳಿದ್ದು,
ಕಡುಬಡವರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುತ್ತಾರೆ.
ಸಮಾಜದ ತಳವರ್ಗದ ಜನರ ಮಕ್ಕಳು ರಾಜ್ಯದಲ್ಲಿ ಶಿಕ್ಷಣ ಪಡೆಯಬಾರದೇ? ಉಳ್ಳವರಿಗೆ ಮಾತ್ರವೇ ಶಿಕ್ಷಣವೇ?
ಹಣವಿದ್ದವರು ತಮ್ಮ ಮಕ್ಕಳನ್ನು ಎಲ್ಲಾ ಸೌಲಭ್ಯಗಳು ಇರುವ ಒಳ್ಳೆಯ ಶಾಲೆಗೆ ಸೇರಿಸಬಹುದು. ಹಣವಿಲ್ಲದವರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಹಾಗಿಲ್ಲವೇ?
“ಎರಡೊತ್ತಿನ ಊಟಕ್ಕೆ ಸಂಕಟಪಡುವವರು ಅದನ್ನೂ ತ್ಯಾಗ ಮಾಡಿ ಮಕ್ಕಳನ್ನು ಶಾಲೆಗೆ ಸೇರಿಸಬೇಕಿದೆ. ಆ ಮೂಲಕ ಉಳ್ಳವರು ಮತ್ತು ಇಲ್ಲದವರ ನಡುವಿನ ಕಂದಕ ಸೃಷ್ಟಿಯಾಗುತ್ತಿದೆ.
ಸರ್ಕಾರಿ ಶಾಲೆಗಳನ್ನು ಮುಚ್ಚಿ, ಖಾಸಗಿ ಶಾಲೆಗಳನ್ನು ಉದ್ಧಾರ ಮಾಡಲಾಗುತ್ತಿದೆ ಎಂದು ಪ್ರಶ್ನೆ ಮಾಡಿದೆ.

ಸದ್ಯ ಈ ಕುರಿತು ಅಮಿಕಸ್‌ ಕ್ಯೂರಿ ಸಲ್ಲಿಸಿರುವ ವರದಿಯನ್ನು ಪರಿಶೀಲಿಸಲು ಎಂಟು ವಾರ ಕಾಲಾವಕಾಶ ಬೇಕು. ಆ ಮೂಲಕ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ವೈಯಕ್ತಿಕವಾಗಿ ಚರ್ಚೆ ನಡೆಸಲಾಗುವುದು ಎಂದು ಸರ್ಕಾರ ಪ್ರತಿಕ್ರಿಯೆ ನೀಡಿದೆ.

ಇದನ್ನೂ ಓದಿ: Annabhagya Scheme: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್‌ನ್ಯೂಸ್‌! ಅನ್ನಭಾಗ್ಯ ಹಣ ಬಂದಿದೆಯೇ? ಈ ರೀತಿ ಚೆಕ್‌ ಮಾಡಿ