Home latest Maharashtra News: ಮರಾಠ ಮೀಸಲಾತಿ ಹೋರಾಟ ತೀವ್ರ: ಕರ್ನಾಟಕದ ಬಸ್‌ಗೆ ಬೆಂಕಿ ಹಚ್ಚಿ ಆಕ್ರೋಶ! ಸಂಚಾರ...

Maharashtra News: ಮರಾಠ ಮೀಸಲಾತಿ ಹೋರಾಟ ತೀವ್ರ: ಕರ್ನಾಟಕದ ಬಸ್‌ಗೆ ಬೆಂಕಿ ಹಚ್ಚಿ ಆಕ್ರೋಶ! ಸಂಚಾರ ತಾತ್ಕಾಲಿಕ ಸ್ಥಗಿತ

Marata reservation agitation

Hindu neighbor gifts plot of land

Hindu neighbour gifts land to Muslim journalist

Marata reservation agitation: ಮರಾಠ ಮೀಸಲು ವಿಚಾರವಾಗಿ ಮಹಾರಾಷ್ಟ್ರದಲ್ಲಿ ಹೋರಾಟ (Marata reservation agitation) ತೀವ್ರಗೊಂಡಿದ್ದು, ಕರ್ನಾಟಕ ಸಾರಿಗೆ ಬಸ್‌ಗೆ ಬೆಂಕಿ ಹಚ್ಚಿರುವ ಘಟನೆಯೊಂದು ನಡೆದಿದೆ. ಹಲವು ದಿನಗಳಿಂದ ಮಹಾರಾಷ್ಟ್ರ ರಾಜ್ಯದಲ್ಲಿ ಮರಾಠ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಇದೀಗ ಹಿಂಸಾಚಾರ ರೂಪ ತಾಳಿದ್ದು, ಮರಾಠಿಗರು ಕರ್ನಾಟಕ ರಾಜ್ಯದ ಬಸ್‌ಗೆ ಬೆಂಕಿ ಹಚ್ಚುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಈ ಘಟನೆ ಸೋಮವಾರ ರಾತ್ರಿ ನಡೆದಿದೆ.

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಕೆಕೆಆರ್‌ಟಿಸಿ ಬಸ್ಸಿಗೆ ಹಚ್ಚಿದ ಪರಿಣಾಮ ಅಂತರ ರಾಜ್ಯ ಬಸ್‌ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆಕೆಆರ್‌ಟಿಸಿ ವ್ಯವಸ್ಥಾಪಕ ಎಂ ರಾಚಪ್ಪ ತಿಳಿಸಿದ್ದಾರೆ.

ಸ್ಥಳೀಯ ಪೊಲೀಸರ ನೆರವಿನಿಂದ ಬಸ್‌ನಲ್ಲಿದ್ದ 39ಪ್ರಯಾಣಿಕರನ್ನು ಸುರಕ್ಷಿತಾಗಿ ಅವರು ತಲುಪುವ ಸ್ಥಳಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಮಂಗಳವಾರ ಕೂಡಾ ಬೀದರ್‌, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಹುಬ್ಬಳ್ಳಿ ಸೇರಿದಂತೆ ಹಲವು ಜಿಲ್ಲೆಗಳಿಂದ ಮಹಾರಾಷ್ಟ್ರಕ್ಕೆ ಸಂಚರಿಸುತ್ತಿದ್ದ ಬಸ್‌ಗಳ ಸೇವೆ ನಿಲ್ಲಿಸಲಾಗಿದೆ.

ಇದನ್ನೂ ಓದಿ: Madhu bangarappa: ರಾಜ್ಯದ ಎಲ್ಲಾ ಶಾಲಾ ಮಕ್ಕಳು, ಶಿಕ್ಷಕರಿಗೆ ಬಂತು ಹೊಸ ರೂಲ್ಸ್ – ಬೆಳ್ಳಂಬೆಳಗ್ಗೆಯೇ ಸಚಿವರಿಂದ ಘೋಷಣೆ