Home Karnataka State Politics Updates Police Insurance Amount Increased: ಹುತಾತ್ಮ ಪೋಲೀಸ್ ವಿಮಾ ಮೊತ್ತ ಹೆಚ್ಚಳದ ಕುರಿತು ಇಲ್ಲಿದೆ ಬಿಗ್...

Police Insurance Amount Increased: ಹುತಾತ್ಮ ಪೋಲೀಸ್ ವಿಮಾ ಮೊತ್ತ ಹೆಚ್ಚಳದ ಕುರಿತು ಇಲ್ಲಿದೆ ಬಿಗ್ ಅಪ್ಡೇಟ್- ರಾಜ್ಯ ಸರ್ಕಾರ ಮಾಡ್ತು ಮಹತ್ವದ ನಿರ್ಧಾರ !!

Police Insurance Amount Increased
Image source: the news minute

Hindu neighbor gifts plot of land

Hindu neighbour gifts land to Muslim journalist

Police Insurance Amount Increased: ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸಲ್ಲಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಒಂದು ವೇಳೆ ಕರ್ತವ್ಯದ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ (Martyred Police Personnel) ಹುತಾತ್ಮರಾದಲ್ಲಿ ಗುಂಪು ವಿಮಾ (Police Insurance) ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಹೆಚ್ಚಳ ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮಾಹಿತಿ ಪ್ರಕಾರ ಕರ್ನಾಟಕದಲ್ಲಿ ಕಳೆದ ವರ್ಷದ ಸೆಪ್ಟೆಂಬರ್‌ನಿಂದ ಈ ವರ್ಷದ ಆಗಸ್ಟ್‌ವರೆಗೆ 16 ಜನ ಹಾಗೂ ದೇಶದಲ್ಲಿ 180 ಜನ ರಕ್ಷಣಾ ಸಿಬ್ಬಂದಿ ಹುತ್ಮಾತರಾಗಿದ್ದು, ಅವರೆಲ್ಲರನ್ನೂ ಸ್ಮರಿಸಿ ನಮನ ಸಲ್ಲಿಸಲಾಗಿದೆ. ಹುತಾತ್ಮರಾದ ಪೊಲೀಸ್ ಸಿಬ್ಬಂದಿ ಕುಟುಂಬದವರಿಗೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತದೆ, ಜೊತಗೆ ಹುತಾತ್ಮ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ (Police Insurance Amount Increased)ಮಾಡುವುದಾಗಿ ತೀರ್ಮಾನಿಸಿ ಇಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.

ಇದೇ ಸಮಯದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಅನೇಕ ಬಾರಿ ಅಪಾಯ ಎದುರಿಸುತ್ತಾರೆ ಮತ್ತು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಅವರಿಗೆ ಸಹಾಯ ಮತ್ತು ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು. ಜೊತೆಗೆ 2125 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು 450 ಕೋಟಿ ನೀಡಲಾಗುವುದು. ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಆರೋಗ್ಯ ಭಾಗ್ಯಕ್ಕಾಗಿ 100 ಕೋಟಿ ರೂ ಒದಗಿಸಲಾಗಿದೆ. ನಿವೃತ್ತ ಸಿಬ್ಬಂದಿಯ ಆರೋಗ್ಯ, ಚಿಕಿತ್ಸೆಗಾಗಿ ನಿಶ್ಚಿತ ಠೇವಣಿ ಇಡಲಾಗಿದೆ. ಪೊಲೀಸ್ ಸಿಬ್ಬಂದಿಯ ಮಕ್ಕಳ ಶಿಕ್ಷಣಕ್ಕಾಗಿ 7 ಜಿಲ್ಲೆಗಳಲ್ಲಿ 7 ಪೊಲೀಸ್ ಪಬ್ಲಿಕ್ ಶಾಲೆ ಆರಂಭಿಸಲಾಗುತ್ತಿದೆ. ಇವುಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ. ಪೊಲೀಸ್ ಕ್ಯಾಂಟೀನ್ ಗಳನ್ನು ಆರಂಭಿಸಲಾಗುತ್ತಿದೆ ಎಂದರು.

ಇನ್ನು ಸುಗಮ ಸಂಚಾರ ವ್ಯವಸ್ಥೆಗಾಗಿ ಹೆಚ್ಚುವರಿ ಪೊಲೀಸ್ ಹುದ್ದೆ ಸೃಷ್ಟಿಸಿದ್ದೇವೆ. ಹೆಚ್ಚುವರಿ ಮಹಿಳಾ ಮತ್ತು ಸಂಚಾರ ಠಾಣೆಗಳನ್ನು ಆರಂಭಿಸಿದ್ದೇವೆ. ಹೊಸ ವಾಹನ ಖರೀದಿಗೆ 100 ಕೋಟಿ ರೂಪಾಯಿಗಳನ್ನು ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅದಲ್ಲದೆ ಇತ್ತೀಚೆಗೆ ಸೈಬರ್ ತಂತ್ರಜ್ಞಾನದ ಜತೆಗೇ ಸೈಬರ್ ಅಪರಾಧಗಳೂ ಹೆಚ್ಚಾಗುತ್ತಿವೆ. ಸುಳ್ಳು ಸುದ್ದಿಗಳು, ಅಶಾಂತಿ ಸೃಷ್ಟಿಸುವ ಸುಳ್ಳುಗಳನ್ನು, ದ್ವೇಷ ಹರಡುವ ಸುಳ್ಳುಗಳನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ಇದನ್ನು ಪರಿಣಾಮಕಾರಿಯಾಗಿ ತಡೆ ಹಿಡಿಯಬೇಕು. ಆದ್ದರಿಂದ ಸುಳ್ಳು ಸುದ್ದಿ ಹರಡುವ ಜಾಲ ತಾಣಗಳು ಮತ್ತು ಅವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಇದನ್ನೂ ಓದಿ: ತಮ್ಮ ಜಮೀನಿಗೆ ತೆರಳಲು ರಸ್ತೆಯಿಲ್ಲದ ರೈತರಿಗೆ ಭರ್ಜರಿ ಗುಡ್ ನ್ಯೂಸ್- ಸರ್ಕಾರದಿಂದ ಬಂತು ನೋಡಿ ಮಹತ್ವದ ಆದೇಶ !!