Home latest Gender Detection: ಭ್ರೂಣಲಿಂಗ ಹತ್ಯೆ ಪ್ರಕರಣ- ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ ಸರ್ಕಾರ

Gender Detection: ಭ್ರೂಣಲಿಂಗ ಹತ್ಯೆ ಪ್ರಕರಣ- ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ ಸರ್ಕಾರ

Gender Detection

Hindu neighbor gifts plot of land

Hindu neighbour gifts land to Muslim journalist

Gender Detection: ರಾಜ್ಯದ ಹಲವೆಡೆ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ನಿಷೇಧವಿದ್ದರೂ ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇದೀಗ ಮೈಸೂರು,ಮಂಡ್ಯ ಭಾಗದಲ್ಲಿ ಗರ್ಭಪಾತ ಮಾಡಿಸುತ್ತಿದ್ದ ಭಾರೀ ಜಾಲವನ್ನೇ ಬೇಧಿಸಲಾಗಿದ್ದು, ಆದರೆ ಇತ್ತೀಚಿನ ದಿನಗಳಲ್ಲಿ ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆ ಸ್ಕ್ಯಾನಿಂಗ್ ಸೆಂಟರ್‌ನ ಮೇಲೆ ಎಚ್ಚರ ವಹಿಸಿದ ಅಧಿಕಾರಿಗಳು ಭ್ರೂಣ ಪತ್ತೆ(Gender Detection), ಹತ್ಯೆ ಬಗ್ಗೆ ಮಾಹಿತಿ ನೀಡಿದವರಿಗೆ ಭಾರಿ ಬಹುಮಾನವನ್ನು ನೀಡುವುದಾಗಿ ಘೋಷಿಸಿದ್ದಾರೆ.

ಈಗಾಗಲೇ ಭ್ರೂಣ ಹತ್ಯೆ ಪ್ರಕರಣದಲ್ಲಿ, ಮೈಸೂರಿನ‌ ತಾಲೂಕು ಆರೋಗ್ಯಧಿಕಾರಿ ಡಾ.ರಾಜೇಶ್ವರಿ ಮತ್ತು ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಜಿಲ್ಲಾ ಕುಟುಂಬ ಕಲ್ಯಾಣಧಿಕಾರಿ ಡಾ.ರವಿ ಅವರನ್ನ ಅಮಾನತು ಮಾಡಲಾಗಿತ್ತು. ಈ ಪ್ರಕರಣ ಹೆಚ್ಚು ತೀವ್ರತೆ ಪಡೆಯುತ್ತಿದ್ದು, ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಮೈಸೂರು ಜಿಲ್ಲೆಯಲ್ಲಿ ಅಧಿಕಾರಿಗಳು ಹೈ ಅಲರ್ಟ್ ಆಗಿದ್ದಾರೆ. ಹೀಗಾಗಿ ಮೈಸೂರು ನಗರ ಜಿಲ್ಲೆಯ 139 ಸ್ಕ್ಯಾನಿಂಗ್ ಸೆಂಟರ್‌ನ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಅದಲ್ಲದೆ ಟಾಸ್ಕ್‌ಪೋರ್ಸ್‌ನಿಂದ ಎಲ್ಲಾ ಕಡೆ ನಿಗಾ ಇಡಲಾಗಿದೆ ಎಂದು ತಿಳಿಸಿದ್ದಾರೆ.

ಸದ್ಯ ಭ್ರೂಣ ಹತ್ಯೆ ಬಗ್ಗೆ ಮಾಹಿತಿ ನೀಡಿದರೆ 50 ಸಾವಿರ ರೂ. ಬಹುಮಾನ ನೀಡಲಾಗುತ್ತದೆ. ಇನ್ನು ಮಾಹಿತಿ ನೀಡಿದವರ ಬಗ್ಗೆ ಗೌಪ್ಯತೆ ಕಾಪಾಡಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಹೊಡೀತು 2 ಲಕ್ಷಕ್ಕೂ ಅಧಿಕ ಬಂಪರ್ ಲಾಟ್ರಿ- ಈ ದಿನ ಖಾತೆ ಸೇರಲಿದೆ 18 ತಿಂಗಳ ಡಿಎ ಅರಿಯರ್ಸ್ !!