Home latest Congress: ರಾಜ್ಯದ ಅರ್ಧಕ್ಕರ್ಧ ಕಾಂಗ್ರೆಸ್ ಎಂಪಿ ಅಭ್ಯರ್ಥಿಗಳ ಆಯ್ಕೆ ಇಂದೇ ಅಂತಿಮ – ಡಿಕೆ ಶಿವಕುಮಾರ್!

Congress: ರಾಜ್ಯದ ಅರ್ಧಕ್ಕರ್ಧ ಕಾಂಗ್ರೆಸ್ ಎಂಪಿ ಅಭ್ಯರ್ಥಿಗಳ ಆಯ್ಕೆ ಇಂದೇ ಅಂತಿಮ – ಡಿಕೆ ಶಿವಕುಮಾರ್!

D.K.Shivakumar Viral Video

Hindu neighbor gifts plot of land

Hindu neighbour gifts land to Muslim journalist

D.K.Shivakumar: ಇದೀಗ ದೆಹಲಿಯಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು ಇವತ್ತು ರಾತ್ರಿ ಒಳಗೆ ಶೇಕಡಾ 50ರಷ್ಟು ವಿಧಾನ ಲೋಕಸಭಾ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ನಾಳೆಯ ಹೊತ್ತಿಗೆ ಕರ್ನಾಟಕದ 28 ಲೋಕಸಭಾ ಸ್ಥಾನಗಳ ಅರ್ಧಕ್ಕರ್ಧ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯ ಸುಳಿವು ದೊರೆಯಲಿದೆ ಎನ್ನಲಾಗಿದೆ.

ಈ ಸಂದರ್ಭ ಮಾತನಾಡಿದ ಶಿವಕುಮಾರ್ ರವರು “ಇಂದಿನ ಸಭೆಗೆ ಮುಖ್ಯಮಂತ್ರಿಗಳು ಆಗಮಿಸಲು ಸಾಧ್ಯವಾಗುತ್ತಿಲ್ಲ. ನಮ್ಮಕಾಂಗ್ರೆಸ್ ಸರ್ಕಾರ ಬಸವಣ್ಣರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು, ಇಂದು ಬಸವ ಕಲ್ಯಾಣದಲ್ಲಿ ಬಹುದೊಡ್ಡ ಕಾರ್ಯಕ್ರಮ ನಿಗದಿಯಾಗಿದೆ. ಆ ಕಾರ್ಯಕ್ರಮದಲ್ಲಿ ಎಲ್ಲಾ ಮಠಾಧೀಶರು ಭಾಗವಹಿಸುತ್ತಿದ್ದಾರೆ. ಹೀಗಾಗಿ ಇದನ್ನು ಮುಂದೂಡಲು ಸಾಧ್ಯವಿಲ್ಲ. ಇದು ದೊಡ್ಡ ಅದ್ಯತೆಯ ಕಾರ್ಯಕ್ರಮವಾದ್ದರಿಂದ ಸಿಎಂ ಸಿದ್ದರಾಮಯ್ಯನವರು ಅಲ್ಲಿ ಭಾಗವಹಿಸುತ್ತಿದ್ದಾರೆ. ಈಗಾಗಲೇ ಚರ್ಚೆ ಮಾಡಿ ನಿರ್ಧಾರ ಮಾಡಿರುವುದನ್ನು ನಾನು ಈ ಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇನ್ನು, ರಾಜ್ಯದ 28 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡುತ್ತೀರಾ ಎಂದು ಕೇಳಿದಾಗ, ” ಒಂದೇ ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡಲು ಆಗುವುದಿಲ್ಲ. ಒಂದೆರಡು ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡುತ್ತೇವೆ’ ಎಂದು ತಿಳಿಸಿದ್ದು, ಈ ಸಂದರ್ಭ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನೋಡಿಕೊಂಡು ನೀವು ಅಭ್ಯರ್ಥಿಗಳ ಆಯ್ಕೆ ಮಾಡುತ್ತೀರಾ ಎಂದು ಕೇಳಿದಾಗ, ‘ಅವರ ರಾಜಕಾರಣಕ್ಕೂ ನಮ್ಮ ರಾಜಕಾರಣಕ್ಕೂ ತುಂಬಾ ವ್ಯತ್ಯಾಸವಿದೆ. ರಾಜ್ಯದ ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿ ರಾಜಕಾರಣ ನಡೆಯುವುದಿಲ್ಲ. ಪಕ್ಷ ಮತ್ತು ನಮ್ಮ ಗ್ಯಾರಂಟಿ ಯೋಜನೆಗಳ ಮೇಲೆ ನಾವು ರಾಜಕೀಯ ಮಾಡುತ್ತೇವೆ. ನಾವು ನಮ್ಮದೇ ಲೆಕ್ಕಾಚಾರ ಇಟ್ಟುಕೊಂಡಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಪಕ್ಷಕ್ಕೆ ಇತ್ತೀಚೆಗೆ ಸೇರ್ಪಡೆಯಾದವರಿಗೆ ಟಿಕೆಟ್ ನೀಡುತ್ತೀರಾ, ಸಚಿವರು ಕೂಡ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರಾ ಎಂದು ಕೇಳಿದಾಗ ಉತ್ತರಿಸಿದ ಅವರು ‘ರಾಜಕೀಯದಲ್ಲಿ ಎಲ್ಲಾ ಸಾಧ್ಯತೆಗಳೂ ಇರುತ್ತವೆ’ ಎಂದಿದ್ದಾರೆ. ಈ ಸಂದರ್ಭ ಸುಪ್ರೀಂ ಕೋರ್ಟ್ ನಿಮಗೆ ರಿಲೀಫ್ ನೀಡಿದ್ದು, ನೊಟೀಸ್ ಬರುತ್ತಿಲ್ಲವೇ ಎಂದು ಕೇಳಿದಾಗ, ‘ಇನ್ನೂ ನೊಟೀಸ್ ಬರುತ್ತಿವೆ. ಮಾಧ್ಯಮಗಳು ಹಗಲು ರಾತ್ರಿ ನನ್ನನ್ನು ಕಾಯುವ ಕೆಲಸ ಮಾಡಿವೆ. ಹೆರಿಗೆ ನೋವು, ಅದರ ನೋವು ಅನುಭವಿಸಿದವರಿಗೆ ಗೊತ್ತೆಂಬಂತೆ ನನ್ನ ನೋವು ನನಗೆ ಗೊತ್ತು. ರಾಜ್ಯದ ಜನ ನನ್ನ ಪರವಾಗಿ ಪ್ರಾರ್ಥನೆ ಹೋರಾಟ ಮಾಡಿದ್ದಾರೆ ಎಂದಿದ್ದಾರೆ ಶಿವಕುಮಾರ್.