ಪೌರಾಡಳಿತ ನಿರ್ದೇಶನಾಲಯ, ಇಎಸ್ಐ, ವಸತಿ ಶಿಕ್ಷಣ ಸಂಸ್ಥೆಗಳ ಸಂಘಕ್ಕೆ ಕುರಿತಂತೆ ಕಲ್ಯಾಣ ಕರ್ನಾಟಕ ವೃಂದದ ವಿವಿಧ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಗಳನ್ನು ನಡೆಸಲು ಕೆಇಎ ಇಂದು ಭಾನುವಾರ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ.
Sponsoredನವೆಂಬರ್ 6, 7 ಮತ್ತು ನವೆಂಬರ್ 14ರಂದು ನಿರ್ದಿಷ್ಟ ಹಾಗೂ ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆ
ಪೌರಾಡಳಿತ ನಿರ್ದೇಶನಾಲಯದ ಎಲೆಕ್ಟ್ರೀಷಿಯನ್ ಗ್ರೇಡ್- 1 (3 ಹುದ್ದೆ) ಮತ್ರು ಗ್ರೇಡ್- 2 (5 ಹುದ್ದೆ) ಹುದ್ದೆಗಳಿಗೆ ನವೆಂಬರ್ 6ರಂದು ಲಿಖಿತ ಪರೀಕ್ಷೆ
ಇಎಸ್ಐ ನ ಫಾರ್ಮಸಿ ಅಧಿಕಾರಿ (11 ಹುದ್ದೆ) ಹಾಗೂ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನರ್ಸಿಂಗ್ ಅಧಿಕಾರಿ (ಶುಶ್ರೂಷಾಧಿಕಾರಿ- 23 ಹುದ್ದೆ) ಹಾಗೂ ನರ್ಸಿಂಗ್ ಅಧಿಕಾರಿ (11) ಹುದ್ದೆಗಳಿಗೆ ನ.7ರಂದು ಪರೀಕ್ಷೆ
ಪೌರಾಡಳಿತ ನಿರ್ದೇಶನಾಲಯದ ನೀರು ಸರಬರಾಜು ಆಪರೇಟರ್ (122 ಹುದ್ದೆ) ಹಾಗೂ ಸಹಾಯಕ ನೀರು ಸರಬರಾಜು ಆಪರೇಟರ್ (80 ಹುದ್ದೆ) ಹುದ್ದಗಳಿಗೆ ನಿರ್ದಿಷ್ಟ ಪತ್ರಿಕೆಯ ಪರೀಕ್ಷೆ ನವೆಂಬರ್ 14
ನವೆಂಬರ್ 14 ರಂದು ಮಧ್ಯಾಹ್ನದ ನಂತರ ಈ ಎಲ್ಲ ಹುದ್ದೆಗಳಿಗೆ ಸಾಮಾನ್ಯ ಜ್ಞಾನ ಪರೀಕ್ಷೆ
ಈ ಪರೀಕ್ಷೆಯ ಸಮಯಗಳು, ವೇಳಾಪಟ್ಟಿಯನ್ನು ಕೆಇಎ ಅಧಿಕೃತ ವೆಬ್ಸೈಟ್ನಲ್ಲಿ ಪರಿಶೀಲನೆ ಮಾಡಬೇಕು.
ಪರೀಕ್ಷೆಗೆ ಹೋಗುವವರಿಗೆ:
ಎರಡು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದೊಳಗೆ ಹಾಜರಿರಬೇಕು.
ಪ್ರತಿ ತಪ್ಪು ಉತ್ತರಕ್ಕೆ 1/4 ರಷ್ಟು (0.25) ಅಂಕ ಕಡಿತ ಮಾಡಲಾಗುವುದು.
ಉತ್ತರಿಸದೇ ಇರುವ ಪ್ರಶ್ನೆಗಳಿಗೆ ಐದನೇ ಆಯ್ಕೆ/ವೃತ್ತವನ್ನು ಶೇಡ್ ಮಾಡಲು ಕೊನೆಯ ಬೆಲ್ ಆದ ನಂತರ ಹೆಚ್ಚುವರಿಯಾಗಿ ಐದು ನಿಮಿಷ ನೀಡಲಾಗುವುದು. ಯಾವುದೇ ಆಯ್ಕೆ/ವೃತ್ತವನ್ನು ಶೇಡ್ ಮಾಡಿಲ್ಲದಿದ್ದರೆ, ಪ್ರಶ್ನೆಗೆ 1/4 (0.25) ಅಂಕಗಳನ್ನು ಕಡಿತ ಮಾಡಲಾಗುತ್ತದೆ ಎಂದು ಕೆಇಎ ತಿಳಿಸಿದೆ.




