Home latest Kodi Mutt Shree Prediction: ಚುನಾವಣಾ ಫಲಿತಾಂಶದ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ ; ಇಲ್ಲಿದೆ...

Kodi Mutt Shree Prediction: ಚುನಾವಣಾ ಫಲಿತಾಂಶದ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ ; ಇಲ್ಲಿದೆ ನೋಡಿ ಶ್ರೀಗಳ ಹೇಳಿಕೆಯ ವಿಡಿಯೋ!!

Hindu neighbor gifts plot of land

Hindu neighbour gifts land to Muslim journalist

Kodi Mutt Shree Prediction: ರಾಜ್ಯ ವಿಧಾನಸಭೆ ಚುನಾವಣೆ (Karnataka election) ಮುಕ್ತಾಯವಾಗಿ ಮತ ಎಣಿಕೆ ಪ್ರಾರಂಭವಾಗಿದೆ. ನಾಳೆ (ಮೇ.13) ಚುನಾವಣೆ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಮಧ್ಯೆ ಎರಡು ತಿಂಗಳ ಹಿಂದೆ ಕೋಡಿಮಠದ ಪೀಠಾಧ್ಯಕ್ಷ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿಯವರು (Kodi Mutt Shree Prediction) ಚುನಾವಣಾ ಫಲಿತಾಂಶದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದು, ಆ ಹೇಳಿಕೆ ಇದೀಗ ಮುನ್ನೆಲೆಗೆ ಬಂದಿದೆ.

ಕೋಡಿಮಠ ಶ್ರೀಗಳು (Kodi Mutt Shree) ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಹೇಳಿದ್ದು, ಈ ಬಾರಿ ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ. ಸಮ್ಮಿಶ್ರ ಸರ್ಕಾರ ಬರುವುದಿಲ್ಲ. ಒಂದೇ ಪಕ್ಷ ಸ್ಪಷ್ಟ ಬಹುಮತ ಪಡೆದುಕೊಳ್ಳುತ್ತದೆ ಎಂದು ಶ್ರೀಗಳು ಭವಿಷ್ಯ ನುಡಿದಿದ್ದರು.

ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ಶ್ರೀಗಳು, “ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಇದೆ. ಚುನಾವಣೆವರೆಗೂ ಪಕ್ಷಾಂತರಗಳು ಇರುತ್ತವೆ. ಪಕ್ಷಗಳು ಕೂಡಿ ಹೋಗುವುದು ಕಷ್ಟ. ಪಕ್ಷ ಗಳು ಒಡೆಯಲಿದ್ದು, ಚುನಾವಣೆ ನಡೆದರೂ ಕೂಡ ಪಕ್ಷಗಳಲ್ಲಿ ಬಿರುಕು ಮೂಡಿ ಒಡೆಯಲಿದೆ. ಆದರೂ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ” ಎಂದು ಹೇಳಿದ್ದರು. ಇನ್ನೂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿದ್ದಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೂ ಪ್ರತಿಕ್ರಿಯಿಸಿದ್ದರು. ಇದೀಗ ಕೋಡಿ ಶ್ರೀಗಳ ಹೇಳಿಕೆಯ ವಿಡಿಯೋ ವೈರಲ್ ಆಗಿದೆ. ಇಲ್ಲಿದೆ ನೋಡಿ ವಿಡಿಯೋ!!

ಇದನ್ನೂ ಓದಿ:PM Kisan Yojana: ಪಿಎಂ ಕಿಸಾನ್ 14ನೇ ಕಂತಿನ ಮೊತ್ತ ಪಡೆಯಲು ಯಾರು ಅರ್ಹರಲ್ಲ? ಸಂಪೂರ್ಣ ಮಾಹಿತಿ ಇಲ್ಲಿದೆ