Home latest KSRTC : ಕರ್ನೂಲ್‌ ಬಸ್ ದುರಂತ ಎಫೆಕ್ಟ್- ಇನ್ಮುಂದೆ KRSTC ಬಸ್ ಗ ಳಲ್ಲಿ ಈ...

KSRTC : ಕರ್ನೂಲ್‌ ಬಸ್ ದುರಂತ ಎಫೆಕ್ಟ್- ಇನ್ಮುಂದೆ KRSTC ಬಸ್ ಗ ಳಲ್ಲಿ ಈ ವಸ್ತುಗಳನ್ನು ಕೊಂಡುಯುವಂತಿಲ್ಲ!!

Hindu neighbor gifts plot of land

Hindu neighbour gifts land to Muslim journalist

 

KSRTC: ಕರ್ನೂಲ್ ಬಸ್ ದುರಂತದ ಬೆನ್ನಲ್ಲೇ ಎಚ್ಚೆತ್ತ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಇನ್ನು ಮುಂದೆ ಬಸ್ಗಳಲ್ಲಿ ಯಾವ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ ಎಂದು ಆದೇಶವನ್ನು ಹೊರಡಿಸಿದೆ.

ಹೌದು, ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಕಿಗೆ ಸುಟ್ಟು ಹಲವರು ಮೃತಪಟ್ಟಿದ್ದರು. ಇದರ ಬೆನ್ನಲ್ಲೆ ಎಚ್ಚೆತ್ತುಕೊಂಡಿರುವ ಕರ್ನಾಟಕ ಸಾರಿಗೆ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರು, ಇನ್ಮುಂದೆ ಸಾರಿಗೆ ಬಸ್ಸುಗಳಲ್ಲಿ ಸ್ಪೋಟಗೊಳ್ಳುವಂತ ವಸ್ತುಗಳನ್ನು ಪ್ರಯಾಣಿಕರು ಕೊಂಡೊಯ್ಯೋದಕ್ಕೆ ನಿಷೇಧ ಹೇರಿ ಇಲಾಖೆ ವ್ಯವಸ್ಥಾಪಕ ನಿರ್ದೇಶಕರಿಗೆ ಮಹತ್ವದ ಸೂಚನೆ ನೀಡಿದ್ದಾರೆ.

ಈ ಕುರಿತಂತೆ ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದು, ಇತ್ತೀಚೆಗೆ ಕರ್ನೂಲ್ ಬಸ್ ದುರಂತ ತೀವ್ರ ದುಃಖಕರವಾದ ಸಂಗತಿ. ಆ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿರುವ ಸುರಕ್ಷತಾ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಬೇಕು. ಈ ಹಿಂದೆ ನಾನು ಸಾರಿಗೆ ಸಚಿವನಾಗಿದ್ದಾಗ ಹಾವೇರಿ ಬಳಿ ಜಬ್ಬಾರ್ ಟ್ರಾವೆಲ್ಸ್ ನ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಪ್ರಯಾಣಿಕರು‌ ತಮ್ಮ ಪ್ರಾಣ ಕಳೆದುಕೊಂಡಿದ್ದರು ಎಂದು ಹೇಳಿದ್ದಾರೆ.