Home latest Ration Card: ರೇಷನ್ ಕಾರ್ಡ್’ದಾರರಿಗೆ ರಾತ್ರೋ ರಾತ್ರಿ ಬಂತು ಸಖತ್ ಗುಡ್ ನ್ಯೂಸ್ !!

Ration Card: ರೇಷನ್ ಕಾರ್ಡ್’ದಾರರಿಗೆ ರಾತ್ರೋ ರಾತ್ರಿ ಬಂತು ಸಖತ್ ಗುಡ್ ನ್ಯೂಸ್ !!

Hindu neighbor gifts plot of land

Hindu neighbour gifts land to Muslim journalist

Ration Card: ರಾಜ್ಯದ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ (Government) ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ. ಭಾರತದಲ್ಲಿ (India) ಪಡಿತರ ಚೀಟಿ (Ration Card) ಬಹಳ ಮುಖ್ಯವಾದ ದಾಖಲೆಗಳಲ್ಲಿ ಒಂದು. ಪಡಿತರ ಚೀಟಿಯ ಮೂಲಕ ಸರ್ಕಾರ (Government) ಅಗತ್ಯವಿರುವವರಿಗೆ ಹಿಟ್ಟು, ಬೇಳೆಕಾಳು, ಅಕ್ಕಿ ಮುಂತಾದ ಪಡಿತರ ಸಾಮಗ್ರಿಗಳನ್ನು ಉಚಿತವಾಗಿ ನೀಡುತ್ತದೆ.

ರಾಜ್ಯದಲ್ಲಿ ಪಡಿತರ ಕಾರ್ಡ್ನಲ್ಲಿರುವ ದೋಷದಿಂದ ಲಕ್ಷಾಂತರ ಫಲಾನುಭವಿಗಳಿಗೆ ಅನ್ನಭಾಗ್ಯ(Anna Bhagya), ಗೃಹಲಕ್ಷ್ಮಿ ಯೋಜನೆಯ (Gruha Lakshmi Yojana Money) ಹಣ ಪಾವತಿಯಾಗದೆ ಬಾಕಿ ಉಳಿದಿದೆ. ಹೀಗಾಗಿ ಜನರು ಪಡಿತರ ಚೀಟಿಗಳಲ್ಲಿ ತಿದ್ದುಪಡಿ ಮಾಡಿಕೊಂಡು ಹಣ ಪಡೆಯಲು ಮುಂದಾಗಿದ್ದಾರೆ‌. ಈ ಮಧ್ಯೆ ಇದೀಗ ರೇಷನ್ ಕಾರ್ಡ್’ದಾರರಿಗೆ ರಾತ್ರೋ ರಾತ್ರಿ ಸಖತ್ ಗುಡ್ ನ್ಯೂಸ್ ಸಿಕ್ಕಿದೆ.

ಆಹಾರ ಇಲಾಖೆಯು ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಿದೆ. ನವೆಂಬರ್ 1 ರಿಂದ ಮತ್ತೊಮ್ಮೆ ಪಡಿತರ ಚೀಟಿಗಳ ತಿದ್ದುಪಡಿಗೆ ಅವಕಾಶ ನೀಡಿದೆ. ಪಡಿತರ ಚೀಟಿಯಲ್ಲಿ ಹೊಸ ಹೆಸರುಗಳು ಸೇರ್ಪಡೆ, ಹೆಸರು ತಪ್ಪಾಗಿದ್ದರೆ ಸರಿಪಡಿಸುವುದು, ವಿಳಾಸ ಬದಲಾವಣೆ, ಪಡಿತರ ಚೀಟಿಗಳಲ್ಲಿನ ಕುಟುಂಬದ ಸದಸ್ಯರ ಹೆಸರು ತೆಗೆದು ಹಾಕುವುದು ಮೊದಲಾದ ತಿದ್ದುಪಡಿಗಳನ್ನು ಮಾಡಿಕೊಳ್ಳಬಹುದು.

ಆಹಾರ ಇಲಾಖೆಯು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅಕ್ಟೋಬರ್ 19 ರಿಂದ 21 ರವರೆಗೆ ಅವಕಾಶ ನೀಡಿತ್ತು. ಆದರೆ, ಸರ್ವರ್ ಸಮಸ್ಯೆಯಿಂದ ಬಹುತೇಕ ಪಡಿತರ ಕಾರ್ಡ್ ಗಳ ತಿದ್ದುಪಡಿ ಆಗಿಲ್ಲ. ಈ ಹಿನ್ನೆಲೆಯಲ್ಲಿ ನವೆಂಬರ್ 1 ರಿಂದ ಮತ್ತೊಮ್ಮೆ ಪಡಿತರ ಚೀಟಿಗಳ ತಿದ್ದುಪಡಿಗೆ ಅವಕಾಶ ನೀಡಿದೆ.

 

ಇದನ್ನು ಓದಿ: Lunar Eclipse: ಚಂದ್ರಗಹಣ ವೇಳೆ ತಪ್ಪಿಯೂ ಈ ಕೆಲಸ ಮಾಡಬೇಡಿ !