Home Crime Mandya: ನಾಪತ್ತೆಯಾಗಿದ್ದ ಸೋಷಿಯಲ್ ಮೀಡಿಯಾ ಸ್ಟಾರ್ ಶವವಾಗಿ ಪತ್ತೆ !!

Mandya: ನಾಪತ್ತೆಯಾಗಿದ್ದ ಸೋಷಿಯಲ್ ಮೀಡಿಯಾ ಸ್ಟಾರ್ ಶವವಾಗಿ ಪತ್ತೆ !!

Mandya

Hindu neighbor gifts plot of land

Hindu neighbour gifts land to Muslim journalist

Mandya: ಮಂಡ್ಯ ಜಿಲ್ಲೆಯ ಮೇಲುಕೋಟೆಯ ಖಾಸಗೀ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ದೀಪಿಕಾ ಶವವಾಗಿ ಪತ್ತೆಯಾಗಿದ್ದಾರೆ.

ಹೌದು, ಮಂಡ್ಯ(Mandya) ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾಗಿದ್ದ ದೀಪಿಕಾ(28) ಮೇಲುಕೋಟೆಯ(Melukote) ಎಸ್‌ಇಟಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಜನವರಿ 20ರಂದು ಶಾಲೆಗೆ ಹೋಗಿದ್ದ ದೀಪಿಕಾ ಮಧ್ಯಾಹ್ನನಿಂದ ನಾಪತ್ತೆಯಾಗಿದ್ದಳು. ನಾಪತ್ತೆಯಾದ ಬಗ್ಗೆ ಕುಟುಂಬಸ್ಥರು ಜ.20ರ ಸಂಜೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಆದರೆ ನಿನ್ನೆ ಸಂಜೆ ದೀಪಿಕಾ ಶವ ಪತ್ತೆಯಾಗಿದೆ.

ಅಚ್ಚರಿ ಅಂದ್ರೆ ದೀಪಿಕಾಳ ಶವ ಮೇಲೆಕೋಟೆ ಬೆಟ್ಟದ ತಪ್ಪಲಿನಲ್ಲಿ ಮಣ್ಣಲ್ಲಿ ಹೂತು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಂದರೆ ದಷ್ಕರ್ಮಿಗಳು ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಿದ್ದಾರೆ. ಇನ್ನು ಕೊಲೆಯಾದ ಶಿಕ್ಷಕಿ ದೀಪಿಕಾ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಆಕ್ಟೀವ್ ಆಗಿದ್ದರು ಎಂದು ತಿಳಿದು ಬಂದಿದ್ದು, ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ.