Home latest ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಲಿಂಗಕಾಮಿ ಜೋಡಿ !! | ಭಾರತದಲ್ಲಿ ಸಲಿಂಗಕಾಮಿ ವಿವಾಹಕ್ಕೆ ಮಾನ್ಯತೆ...

ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಲಿಂಗಕಾಮಿ ಜೋಡಿ !! | ಭಾರತದಲ್ಲಿ ಸಲಿಂಗಕಾಮಿ ವಿವಾಹಕ್ಕೆ ಮಾನ್ಯತೆ ಇಲ್ಲದಿದ್ದರೂ, ಹಸೆಮಣೆಯೇರಿತು ಈ ಜೋಡಿ

Hindu neighbor gifts plot of land

Hindu neighbour gifts land to Muslim journalist

ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಸಲಿಂಗಕಾಮಿ ಜೋಡಿಯೊಂದು ಹಸೆಮಣೆಯೇರಿದೆ. ತೆಲಂಗಾಣದ ಸಲಿಂಗಕಾಮಿ ಜೋಡಿಯೊಂದು ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಶನಿವಾರ ಹೈದರಾಬಾದ್‍ನ ಹೊರವಲಯದಲ್ಲಿರುವ ರೆಸಾರ್ಟ್‍ನಲ್ಲಿ ಸಲಿಂಗಕಾಮಿ ಜೋಡಿಯ ವಿವಾಹ ಮಹೋತ್ಸವ ಅದ್ದೂರಿಯಾಗಿ ನೆರವೇರಿತ್ತು. ಹೋಟೆಲ್ ಮ್ಯಾನೇಜ್‍ಮೆಂಟ್ ಇನ್‍ಸ್ಟಿಟ್ಯೂಟ್‍ನಲ್ಲಿ ಹಿರಿಯ ಅಧ್ಯಾಪಕರಾದ ಕೋಲ್ಕತ್ತಾ ಮೂಲದ ಸುಪ್ರಿಯೊ ಚಕ್ರವರ್ತಿ(31) ಮತ್ತು ಎಂಎನ್‍ಸಿ ಉದ್ಯೋಗಿಯಾಗಿರುವ ದೆಹಲಿ ಮೂಲಕ ಅಭಯ್ ಡ್ಯಾಂಗ್ (34) ಬಿಳಿ ಸೂಟಿನಲ್ಲಿ ಉಂಗುರ ವಿನಿಮಯ ಮಾಡಿಕೊಳ್ಳುವ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ನಂತರ ಬೆಂಗಾಲಿ ಮತ್ತು ಪಂಜಾಬಿ ಸಂಪ್ರದಾಯದಂತೆ ವಿವಾಹ ಮಾಡಿಕೊಂಡಿದ್ದಾರೆ.

8 ವರ್ಷಗಳಿಂದ ರಿಲೇಶನ್ ಶಿಪ್‍ನಲ್ಲಿದ್ದ ಈ ಜೋಡಿ ಇದೀಗ ಅಧಿಕೃತವಾಗಿ ಪತಿ ಮತ್ತು ಪತಿ ಆಗಿದ್ದು, ಈ ವಿಶೇಷ ಮದುವೆಗೆ ಅವರು ಪ್ರಾಮಿಸಿಂಗ್ ಸೆರ್ಮನಿ ಎಂಬ ಹೆಸರನ್ನು ಕೊಟ್ಟಿದ್ದಾರೆ. ಕುಟುಂಬಸ್ಥರ ಒಪ್ಪಿಗೆ ಮೇರೆಗೆ ನಡೆದ ಈ ವಿವಾಹ ಮಹೋತ್ಸವದಲ್ಲಿ ದಂಪತಿಗಳ ಅನೇಕ ಸ್ನೇಹಿತರು ಮತ್ತು ಆಪ್ತರು ಭಾಗವಹಿಸಿದ್ದರು.

ಒಟ್ಟಾರೆ ಭಾರತದಲ್ಲಿ ಸಲಿಂಗಕಾಮಿ ವಿವಾಹಕ್ಕೆ ಮಾನ್ಯತೆ ಇಲ್ಲದಿದ್ದರೂ, ಈ ಜೋಡಿ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮೊದಲ ಭಾರತದ ಸಲಿಂಗಕಾಮಿ ಜೋಡಿಯಾಗಿದೆ. ಈ ವಿವಾಹದಿಂದ ಭಾರತದಲ್ಲಿ ಸಲಿಂಗಕಾಮಿಗಳ ವಿವಾಹಗಳ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂಬ ನಿರೀಕ್ಷೆಯಿದೆ.