Home latest ತನ್ನ ನಾಲ್ಕು ವರ್ಷದ ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ತಾಯಿ!!

ತನ್ನ ನಾಲ್ಕು ವರ್ಷದ ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ತಾಯಿ!!

Hindu neighbor gifts plot of land

Hindu neighbour gifts land to Muslim journalist

ಮೈಸೂರು :ದಿನದಿಂದ ದಿನಕ್ಕೆ ಕೊಲೆ, ಅತ್ಯಾಚಾರಗಳ ಪ್ರಕರಣ ಹೆಚ್ಚುತ್ತಲೇ ಇದೆ. ಆದ್ರೆ ಇಲ್ಲೊಂದು ಕಡೆ ತಾಯಿಯೇ ಹೆತ್ತ ಮಗನನ್ನು ಕೊಚ್ಚಿ ಕೊಲೆಗೈದ ಘಟನೆ ನಡೆದಿದೆ.

ಹೌದು.ಈ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.ತಾಯಿ ಭವಾನಿ ಮಾನಸಿಕ ಅಸ್ವಸ್ಥರಾಗಿದ್ದು, 4 ವರ್ಷದ ಶ್ರೀನಿವಾಸ್ ಎಂಬ ಮಗನನ್ನು ಮಚ್ಚಿನಿಂದ ಕೊಚ್ಚಿ ಹತ್ಯೆಗೈದಿದ್ದಾಳೆ.ಪತಿ ಶಂಕರ್ ಮನೆಯಲ್ಲಿ ಇಲ್ಲದಿದ್ದಾಗ ಭವಾನಿ ಈ ಕೃತ್ಯ ಎಸಗಿದ್ದಾಳೆ ಎಂದು ತಿಳಿದುಬಂದಿದ್ದು,ಸದ್ಯ ಎಚ್.ಡಿ.ಕೋಟೆ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಬೂದನೂರಿನ ಶಂಕರ್ ಜೊತೆ 5 ವರ್ಷದ ಹಿಂದೆ ಭವಾನಿ ಮದುವೆ ಆಗಿದ್ದು,ಭವಾನಿ ಮೈ ಮೇಲೆ ದೇವರು ಬರುತ್ತೆ ಅನ್ನುತ್ತಿದ್ದಳು. ಇತ್ತೀಚೆಗೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಭವಾನಿ, ಗಂಡನೊಂದಿಗೆ ಗಲಾಟೆ ಮಾಡಿಕೊಂಡು ಮಗು ಸಹಿತ ತವರು ಮನೆ ಸೇರಿದ್ದಳು.ಬಳಿಕ ಪತಿ ಶಂಕರ್ ಸಮಾಧಾನಪಡಿಸಿ ವಾಪಸ್ಸು ಕರೆತಂದಿದ್ದರು.ಆದರೆ ಈ ಬಾರಿ ಪತಿ ಕೆಲಸದ ನಿಮಿತ್ತ ಹೊರಗಡೆ ಹೋಗಿದ್ದಾಗ ತನ್ನ ಮಗುವನ್ನ ತಾಯಿ ಭವಾನಿ ಮಚ್ಚಿನಿಂದ ತಲೆಗೆ ನಾಲ್ಕೈದು ಬಾರಿ ಹೊಡೆದು ಕೊಲೆ ಮಾಡಿದ್ದಾಳೆ.

ವಿಷಯ ತಿಳಿಯುತ್ತಿದ್ದಂತೆ ಪತಿ ಶಂಕರ್ ಗ್ರಾಮಸ್ಥರ ನೆರವಿನಿಂದ ಎಚ್.ಡಿ.ಕೋಟೆಯ ತಾಲೂಕು ಆಸ್ಪತ್ರೆಗೆ ಮಗುವನ್ನು ಸೇರಿಸಿದ್ದು,ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಶ್ರೀನಿವಾಸ್ ಮೃತಪಟ್ಟಿದೆ.