Home latest ಲೈಂಗಿಕ ಕಿರುಕುಳ ಆರೋಪ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಎಫ್‌ಐಆರ್

ಲೈಂಗಿಕ ಕಿರುಕುಳ ಆರೋಪ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಎಫ್‌ಐಆರ್

Hindu neighbor gifts plot of land

Hindu neighbour gifts land to Muslim journalist

ಶಾಲಾ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಮಠದ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ಇಲ್ಲಿನ ನಜರಾಬಾದ್ ಠಾಣೆಯಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿ ಶುಕ್ರವಾರ ದೂರು ದಾಖಲಾಗಿದೆ.

ಈ ಪ್ರಕರಣದಲ್ಲಿ ಶಿವಮೂರ್ತಿ ಶಿವಾಚಾರ್ಯ ಶರಣರು ಮೊದಲ ಆರೋಪಿಯಾಗಿದ್ದು, ವಾರ್ಡನ್ ಎರಡನೇ ಆರೋಪಿಯಾಗಿದ್ದಾರೆ. ಮಠದ ಬಸವಾದಿತ್ಯ (ಮರಿಸ್ವಾಮಿ) ಮೂರನೇ ಆರೋಪಿ ಮಠದ ಭಕ್ತರೆನ್ನಲಾದ ಮೈಸೂರಿನ ಪರಮಶಿವಯ್ಯ ಮತ್ತು ವಕೀಲ ಗಂಗಾಧರಯ್ಯ ಕ್ರಮವಾಗಿ ನಾಲ್ಕು ಮತ್ತು ಐದನೇ ಆರೋಪಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಸಿ.ಚಂದ್ರಕುಮಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

‘ಇಬ್ಬರು ವಿದ್ಯಾರ್ಥಿನಿಯರ ಪೈಕಿ ಒಬ್ಬರನ್ನು ಶರಣರು ಮೂರೂವರೆ ವರ್ಷಗಳಿಂದ, ಮತ್ತೊಬ್ಬರನ್ನು ಒಂದೂವರೆ ವರ್ಷದಿಂದ ಲೈಂಗಿಕವಾಗಿ ದೌರ್ಜನ್ಯ ಮಾಡುತ್ತಿರುವುದಾಗಿ, ಅದಕ್ಕೆ ಉಳಿದ ಆರೋಪಿಗಳು ಸಹಕರಿಸಿರುವುದಾಗಿ ವಿದ್ಯಾರ್ಥಿನಿಯರು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಆಪ್ತಸಮಾಲೋಚನೆ ಸಮಯದಲ್ಲಿ ಹೇಳಿಕೆ ನೀಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ರಾತ್ರಿ 10ರ ವೇಳೆಗೆ ಸಮಿತಿಯು ದೂರು ನೀಡುವಂತೆ ಅಧಿಕಾರಿಗೆ ಸೂಚಿಸಿತ್ತು. ಅದರಂತೆ ರಾತ್ರಿ 10.30ರ ವೇಳೆಗೆ ದೂರು ದಾಖಲಾಗಿದೆ. ಸದ್ಯ ಇಬ್ಬರು ಬಾಲಕಿಯರು ಒಡನಾಡಿ ಸಂಸ್ಥೆಯಲ್ಲಿ ಆಶ್ರಯ ಪಡೆದಿದ್ದಾರೆ.

ಚಿತ್ರದುರ್ಗದ ಮುರುಘಾ ಮಠದ ಶಾಲೆಯಲ್ಲಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ಶ್ರೀಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ಶ್ರೀಗಳ ಲೈಂಗಿಕ ಕಿರುಕುಳದಿಂದ ಬೇಸತ್ತ ಮಕ್ಕಳು ರಾಜಧಾನಿ ಬೆಂಗಳೂರಿಗೆ ಬಂದು ಅಲ್ಲಿ ದೂರು ದಾಖಲಿಸಲು ಪ್ರಯತ್ನ ಮಾಡಿದ್ದಾರೆ. ಅದು ಸಾಧ್ಯವಾಗದಿದ್ದಾಗ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದರು. ಆದರೆ ಒಬ್ಬರು ಆಟೋ ಚಾಲಕ ಅವರಿಗೆ ಸಹಾಯ ಮಾಡಿ, ಮೈಸೂರಿನ ಒಡನಾಡಿ ಸಂಸ್ಥೆ ಮೂಲಕ ಇದೀಗ ದೂರು ದಾಖಲಿಸಿದ್ದಾರೆ.

ಒಡನಾಡಿ ಸಂಸ್ಥೆಯ ಬಳಿ ಹೋಗಿ ನ್ಯಾಯ ಸಿಗುತ್ತದೆ ಎಂದು ಆಟೋ ಚಾಲಕರು ಕಳುಹಿಸಿಕೊಟ್ಟರು ಎಂದು ಒಡನಾಡಿ ಸಂಸ್ಥೆ ಮಾಹಿತಿ ನೀಡಿದೆ. ಆ ಇಬ್ಬರು ಮಕ್ಕಳ ಜೊತೆ ಆಪ್ತ ಸಮಾಲೋಚನೆ ಮಾಡಲಾಗಿದೆ. ಮಕ್ಕಳ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದೆನಿಸಿದ ನಂತರ ನಿನ್ನೆ ರಾತ್ರಿ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ ಎಂದು ಒಡನಾಡಿ ಸಂಸ್ಥೆ ಹೇಳಿದೆ.