Home Education NEET Result 2022 : ಇಂದು ನೀಟ್ ಪರೀಕ್ಷೆ ಫಲಿತಾಂಶ | ರಿಸಲ್ಟ್ ನೋಡುವ ವಿಧಾನ...

NEET Result 2022 : ಇಂದು ನೀಟ್ ಪರೀಕ್ಷೆ ಫಲಿತಾಂಶ | ರಿಸಲ್ಟ್ ನೋಡುವ ವಿಧಾನ ಇಲ್ಲಿದೆ

Hindu neighbor gifts plot of land

Hindu neighbour gifts land to Muslim journalist

ರಾಷ್ಟ್ರೀಯ ಅರ್ಹತಾ & ಪ್ರವೇಶ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಜುಲೈ 17ರಂದು ದೇಶದ 546 ನಗರಗಳಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳಿಗೆ ನಡೆದಿದ್ದ ನೀಟ್ ಪರೀಕ್ಷೆ ಫಲಿತಾಂಶ ಸೆಪ್ಟೆಂಬರ್ 7ರ ಬುಧವಾರ ಅಂದರೆ ಇಂದು ಹೊರ ಬೀಳಲಿದೆ. NTA ಅಧಿಕೃತ ವೆಬ್‌ಸೈಟ್ neet.nta.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಈ ವರ್ಷ 18 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿದ್ದರು.

NEET UG 2022 ಫಲಿತಾಂಶ ಡೌನ್ ಲೋಡ್ ಮಾಡುವ ವಿಧಾನ ಹೇಗೆ?

• ನೀಟ್ ಅಧಿಕೃತ ವೆಬ್‌ಸೈಟ್ neet.nta.nic.in ಅಥವಾ ntaresults.nic.in ಗೆ ಭೇಟಿ ನೀಡಿ.

• ಮುಖಪುಟದಲ್ಲಿ “NEET UG – 2022 Result 2022” ಲಿಂಕ್ ಮೇಲೆ ಕ್ಲಿಕ್ ಮಾಡಿ

• ನಂತರ ನಿಮ್ಮ ಲಾಗಿನ್ ಐಡಿ, ಜನ್ಮ ದಿನಾಂಕ, ನೋಂದಣಿ ಸಂಖ್ಯೆಯನ್ನು ನಮೂದಿಸಿ.

• ಆಗ ನಿಮಗೆ ನೀಟ್ ಯುಜಿ ಫಲಿತಾಂಶ ಪರದೆಯ ಮೇಲೆ ಕಾಣಿಸುತ್ತದೆ.

ಅದನ್ನು ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಿ.

ಜುಲೈ 17 ರಂದು ತಾಂತ್ರಿಕ ದೋಷಗಳಿಂದ ನಡೆದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 4 ರಂದು ನೀಟ್ ಮರು ಪರೀಕ್ಷೆಯನ್ನು ನಡೆಸಲಾಗಿತ್ತು. ಈ ವರ್ಷ 18 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು NEET UG ಪರೀಕ್ಷೆ ಬರೆದಿದ್ದರು.