Home Interesting ಭರ್ಜರಿ ರಿಯಾಯಿತಿ ಬೆಲೆಗೆ ಲಭ್ಯವಾಗಲಿದೆ ಒನ್‌ಪ್ಲಸ್‌ ಸ್ಮಾರ್ಟ್ ಫೋನ್

ಭರ್ಜರಿ ರಿಯಾಯಿತಿ ಬೆಲೆಗೆ ಲಭ್ಯವಾಗಲಿದೆ ಒನ್‌ಪ್ಲಸ್‌ ಸ್ಮಾರ್ಟ್ ಫೋನ್

Hindu neighbor gifts plot of land

Hindu neighbour gifts land to Muslim journalist

ಒನ್‌ಪ್ಲಸ್‌ ಮೊಬೈಲ್ ಎಲ್ಲಾ ಬಳಕೆದಾರರ ಆಕರ್ಷಿತ ಫೋನ್ ಆಗಿದೆ. ಈ ಸಂಸ್ಥೆಯ ಜನಪ್ರಿಯ ಫೋನ್‌ಗಳ ಪೈಕಿ ಒಂದಾದ ಒನ್‌ಪ್ಲಸ್‌ 9 ಪ್ರೊ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದ್ದು, ಇದೀಗ ಭರ್ಜರಿ ರಿಯಾಯಿತಿ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ.

ಹೌದು, ಒನ್‌ಪ್ಲಸ್‌ 9 ಪ್ರೊ ಫೋನಿನ 8GB + 128GB ಸ್ಟೋರೇಜ್‌ ವೇರಿಯಂಟ್‌ ಇದೀಗ 49,999 ರೂ. ಲಭ್ಯವಿದೆ. 12GB + 256GB ಸ್ಟೋರೇಜ್‌ ವೇರಿಯಂಟ್‌ 54,999ರೂ. ಗಳ ಬೆಲೆಗೆ ಲಭ್ಯವಿದೆ. ಗ್ರಾಹಕರು ಸಿಟಿ ಬ್ಯಾಂಕ್‌ ಕ್ರೆಡಿಟ್ ಕಾರ್ಡ್ ಹೊಂದಿದ್ದರೆ, ಒನ್‌ಪ್ಲಸ್‌ 9 ಪ್ರೊ ಫೋನ್‌ ಅನ್ನು 5,000 ರೂ. ವರೆಗೆ ರಿಯಾಯಿತಿಯಲ್ಲಿ ಖರೀದಿಸಬಹುದು. ಹಾಗೆಯೇ ಅಮೆರಿಕನ್ ಎಕ್ಸ್‌ಪ್ರೆಸ್ ಕಾರ್ಡ್‌ನಲ್ಲಿ 10% ಕ್ಯಾಶ್‌ಬ್ಯಾಕ್ ಕೊಡುಗೆ ಲಭ್ಯ ಇದೆ. ಇದರ ಜೊತೆಗೆ, ಒನ್‌ಪ್ಲಸ್‌ ಗ್ರಾಹಕರಿಗೆ ಸ್ಪಾಟಿಫೈ ಪ್ರೀಮಿಯಂಗೆ ಆರು ತಿಂಗಳ ಉಚಿತ ಚಂದಾದಾರಿಕೆ ಸಹ ಲಭ್ಯವಾಗಲಿದೆ. ಇನ್ನು ಸಿಟಿ ಬ್ಯಾಂಕ್ ಕೊಡುಗೆಯು ಜೂನ್ 30, 2022 ರವರೆಗೆ ಮಾತ್ರ ಲಭ್ಯ.

ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್ 1,440 x 3,216 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.7 ಇಂಚಿನ 2.0 AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 19.8:9 ಆಗಿದೆ. ಹಾಗೆಯೇ ಡಿಸ್‌ಪ್ಲೇಯು HDR 10+ ಸಫೋರ್ಟ್‌ ಜೊತೆಗೆ LTPO ತಂತ್ರಜ್ಞಾನ ಪಡೆದಿದೆ. ಇನ್ನು ಈ ಫೋನ್ 120Hz ಸ್ಕ್ರೀನ್‌ ರೀಫ್ರೇಶ್‌ ರೇಟ್ ಹೊಂದಿದೆ.

ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 888 SoC ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಒನ್‌ಪ್ಲಸ್‌ ಕೂಲ್‌ ಪ್ಲೇ ಮಲ್ಟಿ ಲೇಯರ್ ಕೂಲಿಂಗ್ ತಂತ್ರಜ್ಞಾನ ಒಳಗೊಂಡಿದೆ. ಹಾಗೆಯೇ ಈ ಪ್ರೊಸೆಸರ್‌ ಆಂಡ್ರಾಯ್ಡ್‌ ಆಕ್ಸಿಜೆನ್ 11 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ಗಳು ಎರಡು ವೇರಿಯಂಟ್ ಮಾದರಿಗಳ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 8GB/12GB RAM ಮತ್ತು 128GB/256GB ಆಗಿವೆ.

ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 8 ಮೆಗಾ ಪಿಕ್ಸಲ್‌ ಸಾಮರ್ಥ್ಯ ಹಾಗೂ 2 ಮೆಗಾ ಪಿಕ್ಸಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಸಹ 65T Warp ಚಾರ್ಜ್‌ ಸಪೋರ್ಟ್‌ ಹಾಗೂ Warp ಚಾರ್ಜ್ 50w ಸಾಮರ್ಥ್ಯದ ವಾಯರ್‌ ಲೆಸ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೂ ಇತ್ತೀಚಿನ ಅಗತ್ಯ ಕನೆಕ್ಟಿವಿಟಿ ಸೌಲಭ್ಯಗಳನ್ನು ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5 ಜಿ, 4 ಜಿ ಎಲ್ ಟಿಇ, ವೈ-ಫೈ 6, ಬ್ಲೂಟೂತ್ 5.2, ಜಿಪಿಎಸ್ / ಎ-ಜಿಪಿಎಸ್, ಎನ್‌ಎಫ್ಸಿ, ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಸೇರಿವೆ.