Home Jobs ONGC MRPL Recruitment 2023: MRPL ನಲ್ಲಿದೆ ಭರ್ಜರಿ ಉದ್ಯೋಗಾವಕಾಶ | ವೇತನ 50 ಸಾವಿರ...

ONGC MRPL Recruitment 2023: MRPL ನಲ್ಲಿದೆ ಭರ್ಜರಿ ಉದ್ಯೋಗಾವಕಾಶ | ವೇತನ 50 ಸಾವಿರ ರೂ.

Hindu neighbor gifts plot of land

Hindu neighbour gifts land to Muslim journalist

ONGC ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಇಲ್ಲಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ONGC MRPLನ ಅಧಿಕೃತ ವೆಬ್‌ಸೈಟ್ mrpl.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರಗಳು: ಕೆಮಿಕಲ್ ವಿಭಾಗ- 28 ಹುದ್ದೆಗಳು
ಮೆಕಾನಿಕಲ್ ವಿಭಾಗ- 24 ಹುದ್ದೆಗಳು
ಸಿವಿಲ್ ವಿಭಾಗ- 2 ಹುದ್ದೆಗಳು
ಎಲೆಕ್ಟ್ರಿಕಲ್ ವಿಭಾಗ- 7 ಹುದ್ದೆಗಳು
ಇನ್ಸ್ಟ್ರುಮೆಂಟೇಶನ್- 11 ಹುದ್ದೆಗಳು
ಕಂಪ್ಯೂಟರ್ ಸೈನ್ಸ್- 5 ಹುದ್ದೆಗಳು
ಕೆಮಿಸ್ಟ್ರಿ ವಿಭಾಗ- 1 ಹುದ್ದೆ
ಒಟ್ಟು ಹುದ್ದೆಗಳ ಸಂಖ್ಯೆ- 78

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 15, 2023

ವಿದ್ಯಾರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಭಾಗದಲ್ಲಿ BE/BTech/MSc ತೇರ್ಗಡೆಯಾಗಿರಬೇಕು.

ವಯೋಮಿತಿ: 27 ವರ್ಷದವರೆಗಿನ ಕಾಯ್ದಿರಿಸದ (UR) ಮತ್ತು ಆರ್ಥಿಕವಾಗಿ ದುರ್ಬಲ ವರ್ಗದ (EWS) ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹಾಗೆಯೇ OBC (NCL)/ SC/ ST ವರ್ಗಕ್ಕೆ 3 ರಿಂದ 5 ವರ್ಷದವರೆಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನಾಗಿ 50 ಸಾವಿರದಿಂದ 1 ಲಕ್ಷ 60 ಸಾವಿರದವರೆಗೆ ಸಂಬಳ ನಿಗದಪಡಿಸಲಾಗುತ್ತದೆ.

ಅರ್ಜಿ ಶುಲ್ಕ: ಸಾಮಾನ್ಯ, EWS ಮತ್ತು OBC ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ- 118 ರೂ.
SC/ ST/ PWBD/ ಮಾಜಿ ಸೈನಿಕ ವರ್ಗಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ನ್ನು ಕ್ಲಿಕ್‌ ಮಾಡಿ