Home latest Bengaluru : ವಾಹನ ತಪಾಸಣೆ ವೇಳೆ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು – ರಾಜ್ಯದ ಪೊಲೀಸರಿಗೆ ಖಡಕ್...

Bengaluru : ವಾಹನ ತಪಾಸಣೆ ವೇಳೆ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು – ರಾಜ್ಯದ ಪೊಲೀಸರಿಗೆ ಖಡಕ್ ಆದೇಶ

Hindu neighbor gifts plot of land

Hindu neighbour gifts land to Muslim journalist

Bengaluru : ಸಾರ್ವಜನಿಕರ ವಾಹನವನ್ನು ತಪಾಸಣೆ ಮಾಡುವ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಪೊಲೀಸರು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು ಸಂಚಾರ ಮತ್ತು ರಸ್ತೆ ಸುರಕ್ಷತೆ, ಬೆಂಗಳೂರು ಇವರು ಮಹತ್ವದ ಆದೇಶ ಹೊರಡಿಸಿದ್ದಾರೆ.

ಹೌದು, ವಾಹನ ತಪಾಸಣಾ ಸಂದರ್ಭದಲ್ಲಿ ಹಾಗೂ ದಂಡದ ಮೊತ್ತ ವಸೂಲಿ ಮಾಡುವಾಗ ಚಾಲಕರು ಹಾಗೂ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್.ಹಿತೇಂದ್ರ ಅವರು ಪೊಲೀಸ್ ಸಿಬ್ಬಂದಿಗೆ ಸೂಚಿಸಿದ್ದಾರೆ. ಈ ಕುರಿತಂತೆ ಎಲ್ಲಾ ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು ಜ್ಞಾಪನ ಪತ್ರ ಹೊರಡಿಸಿದ್ದಾರೆ.

ಕೆಲವು ಪೊಲೀಸ್ ಸಿಬ್ಬಂದಿ ವಾಹನ ತಪಾಸಣಾ ಸಂದರ್ಭದಲ್ಲಿ ವಾಹನ ಚಾಲಕರ ಮೇಲೆ ದೌರ್ಜನ್ಯ, ಹಲ್ಲೆ, ಕಿರುಕುಳ, ಅವಹೇಳನಕಾರಿ, ಅವಾಚ್ಯ ಶಬ್ದಗಳ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ವಾಗ್ವಾದಕ್ಕಿಳಿದು ಅವಮಾನ ಮಾಡುವಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ವರದಿಯಾಗುತ್ತಿರುವುದು ಕಂಡು ಬಂದಿರುವ ಬಗ್ಗೆ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ ಸದಸ್ಯ ಮೋಹನ್ ಕುಮಾರ್ ದಾನಪ್ಪ ದೂರು ನೀಡಿದ್ದರು. ದೂರಿನ ಬೆನ್ನಲ್ಲೆ ಆದೇಶ ಹೊರಡಿಸಿರುವ ಹಿತೇಂದ್ರ, ಸಾರ್ವಜನಿಕರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಕೆಲವು ಪೊಲೀಸ್ ಸಿಬ್ಬಂದಿ ವಾಹನ ತಪಾಸಣಾ ಸಂದರ್ಭದಲ್ಲಿ ವಾಹನ ಚಾಲಕರ ಮೇಲೆ ದೌರ್ಜನ್ಯ, ಹಲ್ಲೆ, ಕಿರುಕುಳ, ಅವಹೇಳನಕಾರಿ, ಅವಾಚ್ಯ ಶಬ್ದಗಳ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ವಾಗ್ವಾದಕ್ಕಿಳಿದು ಅವಮಾನ ಮಾಡುವಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ವರದಿಯಾಗುತ್ತಿರುವುದು ಕಂಡು ಬಂದಿರುವ ಬಗ್ಗೆ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ ಸದಸ್ಯ ಮೋಹನ್ ಕುಮಾರ್ ದಾನಪ್ಪ ದೂರು ನೀಡಿದ್ದರು.ದೂರಿನ ಬೆನ್ನಲ್ಲೆ ಆದೇಶ ಹೊರಡಿಸಿರುವ ಹಿತೇಂದ್ರ, ಸಾರ್ವಜನಿಕರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.