Home latest ಪಿ.ಎಂ ಕಿಸಾನ್ ಫಲಾನುಭವಿಗಳೇ ಗಮನಿಸಿ : ಇ-ಕೆವೈಸಿ ನೋಂದಾವಣಿಗೆ ನಾಳೆಯೇ ಕೊನೆಯ ದಿನ

ಪಿ.ಎಂ ಕಿಸಾನ್ ಫಲಾನುಭವಿಗಳೇ ಗಮನಿಸಿ : ಇ-ಕೆವೈಸಿ ನೋಂದಾವಣಿಗೆ ನಾಳೆಯೇ ಕೊನೆಯ ದಿನ

Hindu neighbor gifts plot of land

Hindu neighbour gifts land to Muslim journalist

ಕೇಂದ್ರ ಸರ್ಕಾರವು ರೈತರ ಕಲ್ಯಾಣಕ್ಕಾಗಿ ಪಿ.ಎಂ.ಕಿಸಾನ್ ಯೋಜನೆಯಡಿ ಅರ್ಹ ಫಲಾನುಭವಿ ರೈತರ ಖಾತೆಗೆ ಇಂತಿಷ್ಟು ಹಣ ಜಮೆ ಮಾಡಲಾಗುತ್ತಿದೆ. ಈ ಯೋಜನೆಯ ನವೀಕರಣಕ್ಕಾಗಿ, ಇ-ಕೆವೈಸಿ ಪೂರ್ಣಗೊಳಿಸಲು ಕೇಂದ್ರ ಈಗಾಗಲೇ ಸೂಚನೆ ನೀಡಿದೆ.

ಈ ಯೋಜನೆಯ ನೋಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು. ಇ-ಕೆವೈಸಿ ಮಾಡಿಸಿಕೊಳ್ಳಲು ನಾಳೆಯೇ ಕೊನೆಯ ದಿನವಾಗಿದ್ದು, ನಿಮ್ಮ ಮುಂದಿನ ಕಂತನ್ನು ಪಡೆಯಲು ಈಗಲೇ ಇ-ಕೆವೈಸಿ ನೋಂದಾಯಿಸಿಕೊಳ್ಳಿ ಎಂದು ವಿಜಯನಗರ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃಷಿ ಇಲಾಖೆ ಸೂಚಿಸಿದ ಫಲಾನುಭವಿಗಳು https://pmkisan.gov.inಗೆ ಭೇಟಿ ನೀಡಿ ಇ-ಕೆವೈಸಿ ಆಯ್ಕೆ ಕ್ಲಿಕ್ ಮಾಡಿ ಆಧಾರ್ ಸಂಖ್ಯೆ ನಮೂದಿಸಿ, ಬಳಿಕ ಆಧಾರ್‍ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ನಮೂದಿಸಬೇಕು. ಬಳಿಕ, ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ನಮೂದಿಸಿ ಪ್ರಕ್ರಿಯೆ ಇ-ಕೆವೈಸಿ ಪೂರ್ಣಗೊಳಿಸಬೇಕು.

ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ ಒಟಿಪಿ ಸೃಜನೆಯಾಗದ ರೈತರು ಹತ್ತಿರದ ಗ್ರಾಮ ಪಂಚಾಯತಿಯಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಅಥವಾ ಸೈಬರ್‍ಗಳಲ್ಲಿ ಇ-ಕೆವೈಸಿ ಮಾಡಲು ಅವಕಾಶವಿರುತ್ತದೆ. ಆದ್ದರಿಂದ ಜಿಲ್ಲೆಯ ಪ್ರತಿಯೊಬ್ಬ ಫಲಾನುಭವಿ ರೈತರು ಆ.15ರೊಳಗೆ ಇ-ಕೆವೈಸಿ ಮಾಡಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ತಾಲೂಕು ಕಚೇರಿ ಆವರಣದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಹಾಗೂ ದೂ.08394-200240ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.