Home latest Tulasi Gouda: ವೃಕ್ಷ ಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ತುಳಸಿ ಗೌಡ ಇನ್ನಿಲ್ಲ !!

Tulasi Gouda: ವೃಕ್ಷ ಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ತುಳಸಿ ಗೌಡ ಇನ್ನಿಲ್ಲ !!

Hindu neighbor gifts plot of land

Hindu neighbour gifts land to Muslim journalist

Tulasi Gouda: ಪರಿಸರ ಪ್ರೇಮಿ,ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ(Tulasi Gouda) ವಯೋ ಸಹಜ ಖಾಯಿಲೆಯಿಂದ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಹೌದು, ಪರಿಸರ ಪ್ರೇಮಿ, ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತುಳಸಿ ಗೌಡ (86) ಸೋಮವಾರ ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಳಸಿ ಗೌಡ, ಹೊನ್ನಳ್ಳಿ ಗ್ರಾಮದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಸುಬ್ರಾಯ, ಸೋನಿ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಇವರು ತಮ್ಮ ಜೀವಿತಾವಧಿಯಲ್ಲಿ ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳಸಿ ಪರಿಸರ ಪ್ರೇಮಿ ಎಂದೇ ಖ್ಯಾತವಾಗಿದ್ದರು. ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು. ಮನೆಯಲ್ಲಿ ತೀರಾ ಬಡತನವಿದ್ದೂ ಕುಟುಂಬಕ್ಕಾಗಿ ಕೂಲಿ ಕೆಲಸವನ್ನು ಮಾಡುತ್ತಲೇ ಹಸಿರು ಕ್ರಾಂತಿ ಮಾಡಿದ್ದ ಪರಿಸರ ಪ್ರೇಮಿ ತುಳಸಿಗೌಡ ಅವರ ಪರಿಸರ ಪ್ರೇಮವನ್ನು ಮೆಚ್ಚಿ ಭಾರತ ಸರ್ಕಾದರದಿಂದ ಕೊಡಮಾಡುವ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಹಿಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವಿಕರಿಸಿದ್ದರು. ಸುಬ್ರಾಯ ಮತ್ತು ಸೋನಿ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.