Home latest Bengaluru: ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಸಾವು ಪ್ರಕರಣ; ಸಿಐಡಿ ತನಿಖೆಗೆ ವಹಿಸಿ ಸರ್ಕಾರ ಆದೇಶ

Bengaluru: ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಸಾವು ಪ್ರಕರಣ; ಸಿಐಡಿ ತನಿಖೆಗೆ ವಹಿಸಿ ಸರ್ಕಾರ ಆದೇಶ

Hindu neighbor gifts plot of land

Hindu neighbour gifts land to Muslim journalist

Bengaluru: ಯಾದಗಿರಿ ನಗರ ಠಾಣೆಯ ಪಿಎಸ್‌ಐ ಪರಶುರಾಮ್‌ (PSI Parashuram) ಸಾವಿನ ಪ್ರಕರಣವನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪ್ರಕರಣದ ಹೆಚ್ಚಿನ ತನಿಖೆ ಸಲುವಾಗಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಕೂಲಂಕಷ ತನಿಖೆ ನಡೆಸುವಂತೆ ಸಿಐಡಿ ಡಿಜಿಪಿ(DGP)ಗೆ ಗೃಹ ಇಲಾಖೆ ಪತ್ರ ಬರೆದು ತನಿಖೆ ಮಾಡುವಂತೆ ಸೂಚಿಸಿದೆ.

ಪೋಲಿಸ್ ಸಬ್ ಇನ್ಸ್ಪೆಕ್ಟರ್ ಪರಶುರಾಮ್‌ ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದರು. ಪಿಎಸ್‌ಐ(PSI) ಸಾವು ಪ್ರಕರಣಕ್ಕೆ ಈಗ ಟ್ವಿಸ್ಟ್‌ ಸಿಕ್ಕಿದೆ. ನಗರ ಪೊಲೀಸ್‌ ಠಾಣೆಯಲ್ಲೇ ಮುಂದುವರಿಸಲು 30 ಲಕ್ಷ ರೂ. ಹಣಕ್ಕಾಗಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರ ಪುತ್ರ ಪಂಪನಗೌಡ ಬೇಡಿಕೆ ಇಟ್ಟಿದ್ದರು ಎಂದು ಮೃತ ಪರಶುರಾಮ್‌ ಪತ್ನಿ ಶ್ವೇತಾ ಆರೋಪಿಸಿದ್ದರು.

ಪಿಎಸ್ಐ ಪರಶುರಾಮ್ ರವರ ಪತ್ನಿ ಹೇಳಿಕೆ ನೀಡಿ, ಕಳೆದ 7 ತಿಂಗಳಿಂದ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈಗ ಮತ್ತೆ ಸೆನ್‌ ಠಾಣೆಗೆ ವರ್ಗಾವಣೆ ಮಾಡಿ ಬಂದಿದ್ದರು. ನಗರ ಠಾಣೆಯಲ್ಲೇ ಮುಂದುವರಿಯಲು 30 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ನನ್ನ ಪತಿ ಮನನೊಂದಿದ್ದರು ಎಂದು ದೂರಿದ್ದಾರೆ.

ಇತ್ತ ಪಿಎಸ್‌ಐ ಸಾವು ವಿಚಾರವಾಗಿ ದಲಿತಪರ ಸಂಘಟನೆಗಳು ಪ್ರತಿಭಟನೆಗಳು ನಡೆಸುತ್ತಿವೆ. ಪರಶುರಾಮ್‌ ಸಾವಿಗೆ ಕಾರಣರಾದವರನ್ನು ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.