Home Karnataka State Politics Updates D.B.Chandregowda: ಇಂದಿರಾಗಾಂಧಿಗೆ ಕ್ಷೇತ್ರ ಬಿಟ್ಟು ಕೊಟ್ಟು ಗೆಲ್ಲಿಸಿದ, ಮಾಜಿ ಸಚಿವ ಚಂದ್ರೇಗೌಡ ವಿಧಿವಶ !!

D.B.Chandregowda: ಇಂದಿರಾಗಾಂಧಿಗೆ ಕ್ಷೇತ್ರ ಬಿಟ್ಟು ಕೊಟ್ಟು ಗೆಲ್ಲಿಸಿದ, ಮಾಜಿ ಸಚಿವ ಚಂದ್ರೇಗೌಡ ವಿಧಿವಶ !!

Hindu neighbor gifts plot of land

Hindu neighbour gifts land to Muslim journalist

D.B.Chandregowda: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ(D.B.Chandregowda) (87) ಅವರು ಚಿಕ್ಕಮಗಳೂರು ‌ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ಇಂದು(ಮಂಗಳವಾರ) ಮುಂಜಾನೆ 12.20 ಕ್ಕೆ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.

 

ಡಿ.ಬಿ.ಚಂದ್ರೇಗೌಡರು ದೇಶ ಕಂಡಿರುವ ಹಿರಿಯ ರಾಜಕೀಯ ಮುತ್ಸದ್ದಿಗಳಲ್ಲಿ ಒಬ್ಬರಾಗಿದ್ದು, ವಿಧಾನಸಭೆ, ವಿಧಾನ ಪರಿಷತ್ತು, ಲೋಕಸಭೆ ಮತ್ತು ರಾಜ್ಯಸಭೆ ಈ ನಾಲ್ಕೂ ಸದನಗಳ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಚಂದ್ರೇಗೌಡ (D.B.Chandregowda) ಅವರು ಕಾನೂನು ಸಚಿವರಾಗಿ ಸೇವೆ ಸಲ್ಲಿಸಿದ್ದರು ಮಾತ್ರವಲ್ಲದೇ, ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು. ಈ ನಡುವೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.1978ರಲ್ಲಿ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು(Indira Gandhi) ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸುವ ಸಲುವಾಗಿ ಚಂದ್ರೇಗೌಡ ರವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದಿರಾ ಗಾಂಧಿಯವರು ಸ್ಪರ್ಧಿಸಲು ಅನುವು ಮಾಡಿಕೊಟ್ಟಿದ್ದರು.

 

2014 ರಿಂದ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದ ಚಂದ್ರೆಗೌಡರು ದಾರದಹಳ್ಳಿಯ ತಮ್ಮ ಪೂರ್ಣಚಂದ್ರ ನಿವಾಸದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ಇಂದು ಮುಂಜಾನೆ ವಯೋಸಹಜ ಅನಾರೋಗ್ಯದಿಂದ ಚಂದ್ರೆ ಗೌಡರು ನಿಧನರಾಗಿದ್ದಾರೆ.ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್‌ನಲ್ಲಿ ಅಂತಿಮ‌ ಸಂಸ್ಕಾರ ನೆರವೇರಲಿದೆ ಎಂದು ತಿಳಿದು ಬಂದಿದೆ.