# ಪುತ್ತೂರು:ನಿನ್ನೆ ನಡೆದ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ!! ಪ್ರತಿಭಟನೆಯ ಬೆನ್ನಲ್ಲೇ ಮತ್ತೆ ಹೊಡೆದಾಡಿಕೊಂಡ ವಿದ್ಯಾರ್ಥಿಗಳು

- Link: https://hosakannada.com/latest/puttur-students-fighting/
- Published: 2021-11-24T13:30:52+00:00
- Author: ಹೊಸಕನ್ನಡ ನ್ಯೂಸ್

ಪುತ್ತೂರು: ನಿನ್ನೆ ಪುತ್ತೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿಗೆ ಸಂಬಂಧಪಡದ ಸಂಘಟನೆ
ಕ್ಯಾಂಪಸ್ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸುತ್ತಿದ್ದ ಘಟನೆಯನ್ನು ಖಂಡಿಸಿ ಇಂದು ಎಬಿವಿಪಿ
ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಈ ಪ್ರತಿಭಟನೆ ಮುಗಿದ ಬೆನ್ನಲ್ಲೆ ವಿದ್ಯಾರ್ಥಿಗಳ
ನಡುವೆ ಮತ್ತೆ ಹೊಡೆದಾಟ ನಡೆದಿದೆ ಎನ್ನಲಾಗಿದ್ದು, ಗಾಯಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.

Sponsored

![](https://hosakannada.com/wp-content/uploads/2021/11/IMG-20211124-WA0020.jpg)

Advertisement

Advertisement

ಹೊಟೆದಾಟದಲ್ಲಿ ಮೂವರು ವಿದ್ಯಾರ್ಥಿಗಳಿಗೆ ತೀವ್ರ ಗಾಯವಾಗಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಗೆ
ದಾಖಲಾಗಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ಘಟನೆಗೆ ನಡೆಯುತ್ತಿದ್ದಂತೆ ಪೊಲೀಸರು ಗುಂಪು ಚದುರಿಸಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Advertisement
