ʼದೇಶದಲ್ಲಿ ಮತ ಕಳ್ಳತನ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಉಲ್ಲಂಘನೆ ಮುಂದುವರಿದಿದ್ದು, ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲʼ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ನ.1 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿಗೆ ಕರೆ ನೀಡಿದ್ದಾರೆ.
Sponsoredಅಲ್ಲದೇ ಈ ಬೃಹತ್ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು ಹಾಗೂ ವರ್ತಕರು ಸೇರಿ ಪ್ರಜಾಪ್ರಭುತ್ವದ ಕಾಳಜಿ ಇರುವ ಪ್ರತಿಯೊಬ್ಬರೂ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.
ಅಲ್ಲದೇ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಈ ರ್ಯಾಲಿಯ ಕುರಿತು ಹೆಚ್ಚಿನ ಉತ್ಸಾಹ ತೋರುತ್ತಿರುವುದಕ್ಕೆ ಹೃತ್ಪೂರ್ವಕ ಧನ್ಯವಾದಗಳು ಎಂದು ವ್ಯಂಗ್ಯವಾಡಿದ್ದಾರೆ. ಮುಂದಿನ ಏಳು ದಿನಗಳ ಕಾಲ ಇದೇ ರೀತಿಯ ಉತ್ಸಾಹ ಇರಲಿ ಎಂದು ಹೇಳಿದ್ದಾರೆ.




