Home latest ರಾಜೀವ್ ಗಾಂಧಿ ಹತ್ಯೆ ಪ್ರಕರಣ: ಎಜಿ ಪೆರಾರಿವಾಲನ್ ಬಿಡುಗಡೆ- ಸುಪ್ರೀಂಕೋರ್ಟ್ ಆದೇಶ !!!

ರಾಜೀವ್ ಗಾಂಧಿ ಹತ್ಯೆ ಪ್ರಕರಣ: ಎಜಿ ಪೆರಾರಿವಾಲನ್ ಬಿಡುಗಡೆ- ಸುಪ್ರೀಂಕೋರ್ಟ್ ಆದೇಶ !!!

Hindu neighbor gifts plot of land

Hindu neighbour gifts land to Muslim journalist

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬರಾದ ಎಜಿ ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ. ನ್ಯಾಯಮೂರ್ತಿಗಳಾದ ನಾಗೇಶ್ವರ ರಾವ್, ಬಿ.ಆರ್.ಬವಾಯಿ ಮತ್ತು ಎ.ಎಸ್.ಬೋಪಣ್ಣ ಸೇರಿದಂತೆ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠವು ಬುಧವಾರ ಈ ತೀರ್ಪನ್ನು ಪ್ರಕಟಿಸಿದೆ.

ಎಜಿ ಪೆರಾರಿವಾಲನ್ ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ಶಿಕ್ಷೆ ಅನುಭವಿಸಿದ್ದರಿಂದ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಸೂಚಿಸಿತು. ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆರಾರಿವಾಲನ್ 30 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು.

ಹತ್ಯೆಯ ಸಮಯದಲ್ಲಿ ಹತ್ತೊಂಬತ್ತು ವರ್ಷದವನಾಗಿದ್ದ ಪೆರಾರಿವಾಲನ್ ಹತ್ಯೆಯ ಮಾಸ್ಟರ್‌ಮೈಂಡ್‌ನ ಎಲ್‌ಟಿಟಿಇ ವ್ಯಕ್ತಿ ಶಿವರಾಸನ್‌ಗಾಗಿ ಎರಡು 9-ವೋಲ್ಟ್ ಬ್ಯಾಟರಿಗಳನ್ನು ಖರೀದಿಸಿದ್ದನೆಂದು ಆರೋಪಿಸಲಾಗಿತ್ತು. ರಾಜೀವ್ ಗಾಂಧಿ ಹತ್ಯೆಗೆ ಬಾಂಬ್ ನಲ್ಲಿ ಬ್ಯಾಟರಿಗಳನ್ನು ಬಳಸಲಾಗಿತ್ತು.

1998 ರಲ್ಲಿ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಪೆರಾರಿವಾಲನ್‌ಗೆ ಮರಣದಂಡನೆ ವಿಧಿಸಿತ್ತು. ಮರು ವರ್ಷ ಸುಪ್ರೀಂ ಕೋರ್ಟ್ ಶಿಕ್ಷೆಯನ್ನು ಎತ್ತಿಹಿಡಿದಿದೆ. ಆದರೆ 2014 ರಲ್ಲಿ ಅದನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಯಿತು. ಈ ವರ್ಷದ ಮಾರ್ಚ್‌ನಲ್ಲಿ, ಉನ್ನತ ನ್ಯಾಯಾಲಯವು ಪೆರಾರಿವಾಲನ್ ಗೆ ಜಾಮೀನು ನೀಡಿತ್ತು. ನಂತರ ಪೆರಾರಿವಾಲನ್ ಜೈಲಿನಿಂದ ಬೇಗನೆ ಬಿಡುಗಡೆ ಕೋರಿ ಮನವಿ ಸಲ್ಲಿಸಿದ್ದ.

ಪೆರಾರಿವಾಲನ್ ಅವರ ಮನವಿಯನ್ನು ವಿರೋಧಿಸಿದ ಕೇಂದ್ರವು, ತಮಿಳುನಾಡು ರಾಜ್ಯಪಾಲರು ಈ ವಿಷಯವನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಉಲ್ಲೇಖಿಸಿದ್ದಾರೆ ಎಂದು ಹೇಳಿದ್ದು, ಅವರು ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದಿತ್ತು. ಪ್ರಕರಣದ ವಿಳಂಬ ಹಾಗೂ ರಾಜ್ಯಪಾಲರ ಕ್ರಮವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿತ್ತು.

ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಮೇ 21, 1991 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಹಿಳಾ ಆತ್ಮಾಹುತಿ ಬಾಂಬರ್‌ನಿಂದ ಹತ್ಯೆಗೀಡಾಗಿದ್ದರು.