Home latest ಲಕ್ಷ್ಮೀಶ ತೋಳ್ಪಾಡಿ ಅವರಿಗೆ 2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಲಕ್ಷ್ಮೀಶ ತೋಳ್ಪಾಡಿ ಅವರಿಗೆ 2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Hindu neighbor gifts plot of land

Hindu neighbour gifts land to Muslim journalist

 

ಪುತ್ತೂರು: ಲಕ್ಷ್ಮೀಶ ತೋಳ್ಪಾಡಿ ಅವರು 2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸಾಹಿತ್ಯ ಅಕಾಡೆಮಿ ವಾರ್ಷಿಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು 24 ಭಾಷೆಗಳಲ್ಲಿ ಬುಧವಾರ (ಡಿ.20) ಪ್ರಕಟಿಸಿದೆ.

ಇದರಲ್ಲಿ 9 ಕವನಗಳು, 6 ಕಾದಂಬರಿಗಳು, 5 ಸಣ್ಣ ಕಥೆಗಳು, 3 ಪ್ರಬಂಧಗಳು ಮತ್ತು 1 ಸಾಹಿತ್ಯ ಅಧ್ಯಯನಗಳು 2023ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಗೆದ್ದಿವೆ.

ಲಕ್ಷ್ಮೀಶ ತೋಳ್ಪಾಡಿ ಅವರು ಬರೆದ “ಮಹಾಭಾರತ ಅನುಸಂಧಾನದ ಭಾರತಯಾತ್ರೆ” ಪ್ರಬಂಧಗಳಿಗೆ ಈ ವಿಶೇಷ ಗೌರವ ದೊರೆತಿದೆ.

ಲೇಖಕ, ಚಿಂತಕ ಮತ್ತು ವಿದ್ವಾಂಸರಾಗಿರುವ ಲಕ್ಷ್ಮೀಶ ತೋಳ್ಪಾಡಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದವರು.