Home latest ಭರಿಸಲಾಗದ ಪತಿಯ ನಿಧನದ ನೋವು: ತವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಭರಿಸಲಾಗದ ಪತಿಯ ನಿಧನದ ನೋವು: ತವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

Hindu neighbor gifts plot of land

Hindu neighbour gifts land to Muslim journalist

ಪತಿಯ ಅಗಲುವಿಕೆಯ ನೋವಿನಿಂದ ಹೊರಬರಲಾರದೇ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸವಣೂರು ಗ್ರಾಮದ ಪೆರಿಯಡ್ಕ ನಿವಾಸಿ ದಿ.ದಿನೇಶ್ ಪೆರಿಯಡ್ಕ ಅವರ ಪತ್ನಿ ರೂಪಾ (30 ವ.) ಎಂದು ಗುರುತಿಸಲಾಗಿದೆ.

ಪತಿಯ ನಿಧನದ ಬಳಿಕ ತವರು ಮನೆ ಕೊಡಗು ಜಿಲ್ಲೆಯ ಪೆರಾಜೆಗೆ ಹೋಗಿದ್ದರು. ಅಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಏನಿದು ಘಟನೆ?
ರೂಪಾ ಅವರು ಮೂಲತಃ ಕೊಡಗು ಜಿಲ್ಲೆಯ ಪೆರಾಜೆಯವರು. ಎರಡು ವರ್ಷಗಳ ಹಿಂದೆ ಅವರನ್ನು ಸವಣೂರಿನ ಪೆರಿಯಡ್ಕದ ದಿನೇಶ್ ಅವರೊಂದಿಗೆ ಮದುವೆ ಮಾಡಿಮಾಡಲಾಗಿತ್ತು. ದಿನೇಶ್ ಪೆರಿಯಡ್ಕ ಅವರು ಅನಾರೋಗ್ಯದಿಂದ ಆ.7 ರಂದು ನಿಧನ ಹೊಂದಿದ್ದರು.

ಇದಾದ ಬಳಿಕ ರೂಪಾ ತವರು ಮನೆ ಪೆರಾಜೆಗೆ ಬಂದಿದ್ದರು.  ಸೋಮವಾರ ( ಸೆ.4) ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕೆ ಬಾತ್ ರೂಮಿಗೆ ಹೋಗಿದ್ದಾಳೆ. ಅಲ್ಲಿ ಬಾಗಿಲು ಹಾಕಿಕೊಂಡು ಚೂಡಿದಾರ ಶಾಲು ಬಳಸಿ ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಎಷ್ಟೇ ಹೊತ್ತಾದರೂ ಆಕೆ ಸ್ನಾನಗೃಹದಿಂದ ಬರದೆ ಇದ್ದ ಕಾರಣದಿಂದ ಮನೆಯವರು ಅನುಮಾನಗೊಂಡು ಬಾಗಿಲು ಒಡೆದು ನೋಡಿದಾಗ ಮಗಳು ಆತ್ಮಹತ್ಯೆ ಮಾಡಿಕೊಂಡ ವಿಷಯ ಬಹಿರಂಗವಾಗಿದೆ. ಈಗ ಕೊಡಗು ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಈ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು ಸೆ.5 ರಂದು ಮರಣೋತ್ತರ ಪರೀಕ್ಷೆ ಮಾಡಲಾಗುವುದು ಎಂದು ತಿಳಿದು ಬಂದಿದೆ.