Home latest School Holiday: ಮಂಗಳವಾರ ಶಾಲಾ- ಕಾಲೇಜು ಹಾಗೂ IT ಕಂಪೆನಿಗಳಿಗೆ ರಜೆ ಘೋಷಣೆ ?!

School Holiday: ಮಂಗಳವಾರ ಶಾಲಾ- ಕಾಲೇಜು ಹಾಗೂ IT ಕಂಪೆನಿಗಳಿಗೆ ರಜೆ ಘೋಷಣೆ ?!

Image source Credit: informal newz

Hindu neighbor gifts plot of land

Hindu neighbour gifts land to Muslim journalist

School Holiday: ತಮಿಳುನಾಡಿಗೆ ಕಾವೇರಿ ನೀರು(Cauvery Issue)ಹರಿಸುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಮಂಗಳವಾರ ರಾಜಧಾನಿ ಬೆಂಗಳೂರು ಬಂದ್ ಗೆ (Bengaluru Band)ಕರೆ ನೀಡಿದ್ದು, ನಗರದ ಫ್ರೀಡಂ ಪಾರ್ಕ್‌ನಲ್ಲಿ ಹಲವು ಸಂಘ ಸಂಸ್ಥೆಗಳು ಸಭೆ ನಡೆಸಿದ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸೆ. 26ರಂದು ಮಂಗಳವಾರ ಸಂಪೂರ್ಣ ಬಂದ್ ಆಗುವುದು ಖಚಿತ ಎನ್ನಲಾಗಿದೆ.

ತಮಿಳುನಾಡಿಗೆ ನೀರು ಬಿಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಇಂದು ಮಂಡ್ಯದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ಕೈಗೊಂಡಿದ್ದು, ರಾಜ್ಯದಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ಕಾವೇರಿ ನೀರು ಬಿಡಲು ಕರ್ನಾಟಕ ಸರ್ಕಾರ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಮುಂದೆ ವಾದ ಮಂಡಿಸಿದೆ. ಕಾವೇರಿ ವಿವಾದ ಕುರಿತು ಚರ್ಚಿಸಲು ವಿಶೇಷ ವಿಧಾನಸಭೆ ಅಧಿವೇಶನ ಕರೆಯಬೇಕು ಎಂದು ಸರ್ಕಾರವನ್ನು ರೈತ ಮುಖಂಡ ಕುರುಬೂರು ಶಾಂತಕುಮಾರ್ ಬೇಡಿಕೆ ಇಟ್ಟಿದ್ದಾರೆ. ಈ ನಿಟ್ಟಿನಲ್ಲಿ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದಾರೆ. ವಿವಿಧ ಸಂಘಟನೆಗಳಿಂದ ಬೆಂಬಲ ನೀಡಲು ಮನವಿ ಮಾಡಲಾಗಿದೆ. ಹೀಗಾಗಿ, ಬೆಂಗಳೂರಿನಲ್ಲಿ ಶಾಲಾ- ಕಾಲೇಜುಗಳಿಗೆ(School Holiday), ಫಿಲಂ ಚೇಂಬರ್ ಮತ್ತು ಐಟಿ ಕಂಪನಿಗಳಿಗೆ(IT Company)ರಜೆ ಘೋಷಿಸುವಂತೆ ಕೋರಿ ಶಾಂತಕುಮಾರ್ ಮನವಿ ಸಲ್ಲಿಸಿದ್ದಾರೆ.

ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 21 ರಂದು ನಿರಾಕರಿಸಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಂಡು ತಮಿಳುನಾಡಿಗೆ ನೀರು ಬಿಡಲು ಕರ್ನಾಟಕ ಸರ್ಕಾರ ಶುಕ್ರವಾರ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಈಗಾಗಲೇ ಕೈಗೊಳ್ಳಲಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಬೆಂಗಳೂರಿನಲ್ಲಿ ಶನಿವಾರ ವಿವಿಧ ಗುಂಪುಗಳು ಪ್ರತಿಭಟನೆ ನಡೆಸಿ ಹಲವೆಡೆ ಸಂಚಾರ ಸ್ಥಗಿತಗೊಳಿಸಲು ನಿರ್ಧರಿಸಿದೆ. ಬಂದ್‌ ಕುರಿತ ಸಭೆಯಲ್ಲಿ ಆಮ್ ಆದ್ಮಿ ಪಾರ್ಟಿ, ಹಲವಾರು ನಾಗರಿಕ ವೆಲ್ಫೇರ್ ಅಸೋಸಿಯೇಷನ್‌ಗಳು ಮತ್ತು ಕನ್ನಡ ಪರ ಸಂಘಟನೆಗಳು ಸೇರಿದಂತೆ 15 ಕ್ಕೂ ಹೆಚ್ಚು ಸಂಘಟನೆಗಳು ಸಭೆಯಲ್ಲಿ ಭಾಗಿಯಾಗಿದ್ದವು.