ಶನಿವಾರ, 24 ಅಕ್ಟೋಬರ್ 2026

ಶಾಲಾ ವ್ಯಾನ್ ರೇಡಿಯೇಟರ್ ಬ್ಲಾಸ್ಟ್ | ಮಕ್ಕಳಿಗೆ ತೀವ್ರ ಗಾಯ

ಸ್ಕೂಲ್ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ವ್ಯಾನ್ ನಲ್ಲಿದ್ದ ರೇಡಿಯೇಟರ್ ಬ್ಲಾಸ್ಟ್ ಆಗಿ ಮಕ್ಕಳು ತೀವ್ರವಾಗಿ ಗಾಯಗೊಂಡ ಘಟನೆಯೊಂದು ನಡೆದಿದೆ.

ಹುಬ್ಬಳ್ಳಿಯ ಖಾಸಗಿ ಶಾಲೆಯೊಂದರ ಮಕ್ಕಳನ್ನು ಕರೆದೊಯ್ಯುವ ವ್ಯಾನ್‌ನ ರೇಡಿಯಟರ್ ಬ್ಲಾಸ್ಟ್ ಆಗಿ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕ ಘಟನೆ ಮಂಗಳವಾರ ಸಂಜೆ ಇಲ್ಲಿನ ಗೋಕುಲ ರಸ್ತೆ ಯ ಸೆಂಟ್ರಲ್ ಎಕ್ಸಾಯೀಜ್ ಕಾಲೋನಿಯಲ್ಲಿ ನಡೆದಿದೆ.

ಗಾಯಾಳು ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಖಾಸಗಿ ಶಾಲೆಗೆ ಸೇರಿದ ವಿದ್ಯಾರ್ಥಿಗಳು ಶಾಲೆಯಿಂದ ಮನೆಗೆ ವಾಪಸ್ಸು ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಸ್ಥಳಕ್ಕೆ ಗೋಕುಲ ರೋಡ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ