Home Breaking Entertainment News Kannada ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಇನ್ನಿಲ್ಲ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ(84) ಅವರು ಅನಾರೋಗ್ಯದಿಂದ ಇಂದು ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ.

ಇತ್ತೀಚಿಗೆ ಕಾರಿನಲ್ಲಿ ಶಿವರಾಂ ಹೊರಗೆ ಹೋಗಿದ್ದು,ಆ ವೇಳೆ ಅಪಘಾತವು ಸಂಭವಿಸಿ ತಲೆಗೆ ಸ್ವಲ್ಪ ಪೆಟ್ಟಾಗಿತ್ತು. ಬಳಿಕ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ನಡೆಸಿದಾಗ ವರದಿಯಲ್ಲಿ ಯಾವುದೇ ಸಮಸ್ಯೆಗಳೂ ಪತ್ತೆಯಾಗಿರಲಿಲ್ಲ.

ಆದರೆ ಕಳೆದ ಮಂಗಳವಾರ ರಾತ್ರಿ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ನಡೆಸಲಾಗಿದ್ದು, ಪೂಜೆ ಮಾಡಲು ಶಿವರಾಂ ಅವರು ಪೂಜೆ ಮನೆಗೆ ಹೋದಾಗ ಕೆಳಗೆ ಬಿದ್ದಿದ್ದಾರೆ. ಈ ವೇಳೆಗೆ ತಲೆಗೆ ಗಂಭೀರವಾಗಿ ಪೆಟ್ಟಾಗಿದೆ. ಆಸ್ಪತ್ರೆಗೆ ದಾಖಲಿಸಿದ ವೇಳೆ ಮಿದುಳಿನಲ್ಲಿ ರಕ್ತಸ್ರಾವವಾಗಿರುವುದು ಕಂಡು ಬಂದಿತ್ತು.ಆದರೆ ಇಂದು ಚಿಕಿತ್ಸೆ ಫಲಕಾರಿ ಆಗದೆ ಇಹಲೋಕ ತ್ಯಜಿಸಿದ್ದಾರೆ.ಹೊಸಕೆರೆಹಳ್ಳಿಯ ಖಾಸಗಿ ಆಸ್ಪತ್ರೆಯಿಂದ ಬನಶಂಕರಿಗೆ ಮೃತದೇಹ ಕೊಂಡೊಯ್ಯಲು ಸಿದ್ದತೆ ನಡೆಸಲಾಗುತ್ತಿದೆ.ಮನೆಯ ಬಳಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಅಂತ್ಯಕ್ರಿಯೆ ನಡೆಯಲಿದೆ.

ಎಸ್. ಶಿವರಾಮ್ ಕನ್ನಡ ಚಿತ್ರನಟ.ಇವರು ನೂರಾರು ಕನ್ನಡ ಚಿತ್ರಗಳಲ್ಲಿ ಸುಮಾರು ಆರು ದಶಕಗಳಿಂದ ಪೋಷಕನಟನಾಗಿ, ಹಾಸ್ಯನಟನಾಗಿ ನಟಿಸಿ ಉತ್ತಮ ನಟನೆಂದು ಪ್ರಸಿದ್ಧರಾಗಿದ್ದಾರೆ.ಇವರು ಕೇವಲ ನಟನೇ ಅಲ್ಲದೆ ನಿರ್ದೇಶಕನಾಗಿ,ನಿರ್ಮಾಪಕನಾಗಿ ಕೂಡಾ ಚಿತ್ರರಂಗಕ್ಕೆ ತನ್ನ ಕೊಡುಗೆ ನೀಡಿದ್ದಾರೆ.