Home latest Shakthi yojane: ಮಹಿಳೆಯರೇ ಗಮನಿಸಿ- ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ಉಚಿತ ಪ್ರಯಾಣ ರದ್ದು...

Shakthi yojane: ಮಹಿಳೆಯರೇ ಗಮನಿಸಿ- ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ಉಚಿತ ಪ್ರಯಾಣ ರದ್ದು !! ಸರ್ಕಾರದಿಂದ ಮಹತ್ವದ ನಿರ್ಧಾರ !!

Hindu neighbor gifts plot of land

Hindu neighbour gifts land to Muslim journalist

Shakthi yojane: ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಪ್ರಮುಖ ಯೋಜನೆಯಾದ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ(Free Bus Travel For Women Scheme) ಜಾರಿಯಾಗಿ ರಾಜ್ಯದ್ಯಂತ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಮಹಿಳೆಯರು ದಿನದಿಂದ ದಿನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣ ಬೆಳೆಸುತ್ತಲೇ ಇದ್ದಾರೆ. ಕೊನೆಗೂ ಇದೀಗ ಸರ್ಕಾರ ಉಚಿತವಾಗಿ ಪ್ರಯಾಣಿಸೋ ಎಲ್ಲಾ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಬಗ್ಗೆ ಬಿಗ್ ಅಪ್ಡೇಟ್ ನೀಡಿದೆ.

ಹೌದು, ಇಷ್ಟು ದಿನ ಮಹಿಳೆಯರು ತಮ್ಮ ಗುರುತಿರುವ ಆಧಾರ್ ಕಾರ್ಡ್, ಪಾನ್ ಕಾರ್ಡ್ ಅಥವಾ ವೋಟರ್ ಐಡಿ ಬಳಸಿ ಶಕ್ತಿಯೋಜನೆ ಅಡಿಯಲ್ಲಿ ರಾಜ್ಯದ್ಯಂತ ಸರ್ಕಾರಿ ಬಸ್ಸಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದರು. ಆದರಿನ್ನು ನೀವು ಸ್ಮಾರ್ಟ್ ಕಾರ್ಡ್ ತೋರಿಸಿ ಪ್ರಯಾಣ ಬೆಳೆಸಬೇಕಾಗುತ್ತದೆ. ಸರಕಾರ ಈ ಯೋಜನೆಯಡಿ ಸ್ಮಾರ್ಟ್‌ ಕಾರ್ಡ್‌ ನೀಡುವ ಬಗ್ಗೆ ಸಾಕಷ್ಟು ಯೋಚಿಸಿ ನಿರ್ಧಾರ ಕೈಗೊಂಡಿದೆ. ಇದು ಜಾರಿಯಾದ ಬಳಿಕ ಸ್ಮಾರ್ಟ್ ಕಾರ್ಡ್ ಇದ್ದರೆ ಮಾತ್ರ ಉಚಿತ ಪ್ರಯಾಣ ಮಾಡಬಹುದಾಗಿದೆ.

ಇನ್ನು ಮಹಿಳೆಯರು ಶಕ್ತಿ ಸ್ಮಾರ್ಟ್‌ ಕಾರ್ಡ್‌ಗಾಗಿ (Shakti Smart Card) 14.16 ರೂ. ಗಳನ್ನು ಪಾವತಿಸಬೇಕಾಗುತ್ತದೆ. ಇದಕ್ಕಾಗಿ ಅರ್ಜಿಗಳನ್ನು ಶೀಘ್ರದಲ್ಲೇ ಸರಕಾರ ಬಿಡುಗಡೆ ಮಾಡಲಾಗುತ್ತದೆ. ಇದರ ನೋಂದಾಣಿಗಾಗಿ ಮಹಿಳೆಯರು ಹತ್ತಿರದ ಕರ್ನಾಟಕ ಒನ್, ಬಾಪೂಜಿ ಕೇಂದ್ರ, ಬೆಂಗಳೂರು ಒನ್‌ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಶಕ್ತಿ ಸ್ಮಾರ್ಟ್‌ ಕಾರ್ಡ್‌ ಅನ್ನು ಪಡೆಯಬಹುದಾಗಿದೆ.

ಅಂದಹಾಗೆ ರಾಜ್ಯದಲ್ಲಿ ಶಕ್ತಿ ಯೋಜನೆಯನ್ನು (Karnataka Govt Shakti Yojana) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಜೂನ್‌ 11ರಂದು ಚಾಲನೆ ನೀಡುವ ಮೂಲಕ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣವನ್ನು ಘೋಷಿಸಿದ್ದರು. ಈ ಯೋಜನೆಯ ಚಾಲನೆಯ ದಿನದಿಂದ ರಾಜ್ಯದ ಮಹಿಳೆಯರು ರಾಜ್ಯದ ಎಲ್ಲೆಡೆ ಉಚಿತವಾಗಿ ಪ್ರಯಾಣ ಮಾಡುವ ಮೂಲಕ ಯೋಜನೆಯ ಲಾಭವನ್ನು ಪಡೆದಿದ್ದಾರೆ.