Home latest ಎಸ್.ಎಸ್.ಎಲ್.ಸಿ ಪರೀಕ್ಷೆ ಮುಗಿಸಿ ಮರಳುತ್ತಿದ್ದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ!! ಸ್ಥಳೀಯರಿಂದ ಸಂತ್ರಸ್ಥೆಯ ರಕ್ಷಣೆ-ಮೂವರು ಕಾಮುಕರ...

ಎಸ್.ಎಸ್.ಎಲ್.ಸಿ ಪರೀಕ್ಷೆ ಮುಗಿಸಿ ಮರಳುತ್ತಿದ್ದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ!! ಸ್ಥಳೀಯರಿಂದ ಸಂತ್ರಸ್ಥೆಯ ರಕ್ಷಣೆ-ಮೂವರು ಕಾಮುಕರ ಬಂಧನ

Hindu neighbor gifts plot of land

Hindu neighbour gifts land to Muslim journalist

ನಿರ್ಜನ ಪ್ರದೇಶದಲ್ಲಿ ಹುಡುಗಿ ಮೇಲೆ ಮೂವರು ಕಾಮುಕರು ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆಯೊಂದು ಸೋಮವಾರ (ಏ.11) ನಡೆದಿದೆ. ಈ ಘಟನೆ ನಡೆದಿರುವುದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣ ಹೊರವಲಯದ ಪಾತಬಾಗೇಪಲ್ಲಿಯಲ್ಲಿ‌.

ಸೋಮವಾರ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದ ನಂತರ, ವಿದ್ಯಾರ್ಥಿನಿಯೋರ್ವಳು ಖುಷಿಖುಷಿಯಾಗಿ ತನ್ನ ಪ್ರಿಯಕರನ ಜೊತೆ ಕಾಲಕಳೆಯಲು ನಿರ್ಜನ ಪ್ರದೇಶದ ಬೆಟ್ಟಗುಡ್ಡಗಳತ್ತ ತೆರಳಿದ್ದಳು.

ಇತ್ತ ಹುಡುಗಿ ಹಾಗೂ ಪ್ರಿಯಕರ ನಾರಾಯಣ ಸ್ವಾಮಿ ನಿರ್ಜನ ಪ್ರದೇಶದಲ್ಲಿ ಸರಸ ಸಲ್ಲಾಪದಲ್ಲಿ ಮೈಮರೆತಿದ್ದರು. ಆದರೆ ನಾರಾಯಣ ಸ್ವಾಮಿ ಸ್ನೇಹಿತರು ಅಲ್ಲೇ ಮರೆಯಲ್ಲಿ ಇದ್ದು, ಈ ಪ್ರೇಮಿಗಳ ಸರಸ ಸಲ್ಲಾಪಗಳನ್ನು ವೀಡಿಯೋ ಮಾಡಿ ರೆಕಾರ್ಡ್ ಮಾಡಿಕೊಳ್ಳುತ್ತಿದ್ದರು. ಈ ವಿಷಯ ಮೈಮರೆತ ಪ್ರೇಮಿಗಳಿಗೆ ಗೊತ್ತಿರಲಿಲ್ಲ. ನಾರಾಯಣ ಸ್ವಾಮಿ ಈ ಸ್ಥಳಕ್ಕೆ ಬರಲು ಮಂಜು ಎಂಬ ಸ್ನೇಹಿತನ ಜೊತೆ ಡ್ರಾಪ್ ತಗೊಂಡು ಈ ನಿರ್ಜನ ಜಾಗಕ್ಕೆ ಬಂದಿದ್ದ.

ಪ್ರಿಯಕರನ ಸ್ನೇಹಿತ ಮಂಜು ಹಾಗೂ ಅಲ್ಲಿಯೇ ಮದ್ಯಪಾನದಲ್ಲಿ ತೊಡಗಿದ್ದ ನಾಗರಾಜು, ಸುರೇಶ್ ಸೇರಿ ಪ್ರೇಮಿಗಳ ಸರಸ ಸಲ್ಲಾಪದ ವೀಡಿಯೋ ರೆಕಾರ್ಡ್ ಮಾಡಿಕೊಂಡು, ತಮಗೂ ಸಹಕರಿಸುವಂತೆ ಒತ್ತಡ ಹೇರಿ ಬ್ಲಾಕ್‌ಮೇಲ್ ಮಾಡಿದ್ದಾರೆ. ಈ ವೇಳೆ ಪ್ರಿಯಕರ ನಾರಾಯಣಸ್ವಾಮಿ ಅಲ್ಲಿಂದ ಓಡಿ ಬಂದು ಸ್ಥಳೀಯರಿಗೆ ವಿಷಯ ತಿಳಿಸಿದ್ದಾನೆ.

ಕೂಡಲೇ ಸ್ಥಳೀಯರೆಲ್ಲ ಬೆಟ್ಟದ ಕಡೆಗೆ ಹೋಗಿ ಹುಡುಗಿಯನ್ನು ರಕ್ಷಣೆ ಮಾಡಿ ಮೂವರು ಯುವಕರನ್ನು ಹಿಡಿದಿದ್ದಾರೆ. ನಂತರ ಹುಡುಗಿ, ನಾರಾಯಣಸ್ವಾಮಿ ಸೇರಿದಂತೆ ಮೂವರು ಯುವಕರನ್ನು ಬಾಗೇಪಲ್ಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಪೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸದ್ಯ ಹುಡುಗಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿಯ ಬಾಲಕಿಯರ ಬಾಲಮಂದಿರದಲ್ಲಿ ರಕ್ಷಣೆ ನೀಡಲಾಗಿದೆ. ನಾರಾಯಣಸ್ವಾಮಿ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ ಮೂವರು ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಚಿಕ್ಕಬಳ್ಳಾಪುರ ನಗರ ಠಾಣೆಗೆ ಕರೆತಂದಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.