Home latest ಕೈಯ ಮಣಿಕಟ್ಟು ಕೊಯ್ದುಕೊಂಡು ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣು

ಕೈಯ ಮಣಿಕಟ್ಟು ಕೊಯ್ದುಕೊಂಡು ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣು

Hindu neighbor gifts plot of land

Hindu neighbour gifts land to Muslim journalist

ನೆಝಕಲ್ ಚರ್ಚ್ ನ ನಾಲ್ಕನೇ ವಾರ್ಡ್ ನ ನರೋಡ್ ನಲ್ಲಿ ಒಂದೇ ಕುಟುಂಬದ ಮೂವರು ಕೈಯ ಮಣಿಕಟ್ಟನ್ನು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೇರಳದಲ್ಲಿ ನಡೆದಿದೆ.

ಘಟನೆಯ ಪರಿಣಾಮವಾಗಿ ಇಬ್ಬರು ಮೃತಪಟ್ಟು ಓರ್ವರು ಸಾವು ಬದುಕಿನ ನಡುವೆ ಹೋರಾಡುತ್ತಿರುವ ಮಾಹಿತಿ ತಿಳಿದು ಬಂದಿದೆ.ನೆಝಕಲ್ ನ ಸೈಂಟ್ ಮೇರಿ ಶಾಲೆಯ ಶಿಕ್ಷಕಿಯಾಗಿದ್ದ 49 ವರ್ಷ ವಯಸ್ಸಿನ ಜೆಸ್ಸಿ ಮತ್ತು ಅವರ ಸಹೋದರ 51 ವರ್ಷ ವಯಸ್ಸಿನ ಜೋಸ್ ಮೃತಪಟ್ಟವರು ಎಂದು ತಿಳಿದು ಬಂದಿದೆ.

ಇಲ್ಲಿನ ನೆಝಕಲ್ ವಾರ್ಡ್ ಸದಸ್ಯ ಎ.ಪಿ.ಲಾಲು ಅವರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ.ಮೃತರು ತಮ್ಮ ಮಣಿಕಟ್ಟು ಕತ್ತರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಮಾಹಿತಿ ದೊರೆತ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಗಿಲು ಒಡೆದು ಒಳಗೆ ಪ್ರವೇಶಿಸಿದ್ದು, ಈ ವೇಳೆ ಜೆಸ್ಸಿ ಹಾಗೂ ಜೋಸ್ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವುದು ಪತ್ತೆಯಾಗಿತ್ತು. ಇವರ ತಾಯಿ 80 ವರ್ಷ ವಯಸ್ಸಿನ ರೀಟಾ ಅವರು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದು,ಅವರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು ಎಂದು ತಿಳಿದು ಬಂದಿದೆ.

ರೀಟಾ ಅವರನ್ನು ತಕ್ಷಣವೇ ಎರ್ನಾಕುಲಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಆತ್ಮಹತ್ಯೆಗೆ ಕಾರಣ ಏನು ಎನ್ನುವುದು ಇನ್ನೂ ಸ್ಪಷ್ಟಗೊಂಡಿಲ್ಲ. ಆದರೆ, ಈ ಮೂವರು ಕೂಡ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು, ಈಗಾಗಲೇ ಈ ಸಂಬಂಧ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ.