ಸೋಮವಾರ, 2 ನವೆಂಬರ್ 2026

ಏಕಾಏಕಿ ಮೊಸರಿನ ದರ ಏರಿಕೆ, ವ್ಯಾಪಕ ಆಕ್ರೋಶದ ಬೆನ್ನಲ್ಲೆ ದರ ಇಳಿಕೆಗೆ ಸಿಎಂ ಸೂಚನೆ

Advertisement
Advertisement

ರಾಜ್ಯದಲ್ಲಿ ಹಾಲಿನ ಬೆಲೆ ಏರಿಕೆಯ ಬೆನ್ನಲ್ಲೇ ಏಕಾಏಕಿ ಮೊಸರಿನ ದರವನ್ನು ಲೀಟರ್‌ಗೆ ರೂ.14 ಹೆಚ್ಚಿಸಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ವಿರೋಧ ಪಕ್ಷದ ನಾಯಕರು ಕೂಡಾ ಸರಕಾರದ ಈ ಕ್ರಮವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು. ಸಾರ್ವಜನಿಕರ ಈ ಭಾರೀ ವಿರೋಧ ಹಾಗೂ ವಿಪಕ್ಷಗಳ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ ರಾಜ್ಯ ಸರಕಾರವು ಮೊಸರಿನ ಬೆಲೆಯನ್ನು ಇಳಿಕೆ ಮಾಡಲು ಮಹತ್ವದ ತೀರ್ಮಾನ ಕೈಗೊಂಡಿದೆ.

Sponsored

ಹಾಲಿನ ದರ ಮಾತ್ರ ಏರಿಕೆಯಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಹಾಲಿನ ಜೊತೆಗೆ ಯಾವುದೇ ಮುನ್ಸೂಚನೆ ನೀಡದೆ ಮೊಸರಿನ ದರವನ್ನು ಲೀಟರ್‌ಗೆ ರೂ.14 ಏರಿಸಿದ್ದು, ಬಡ ಮತ್ತು ಮಧ್ಯಮ ವರ್ಗದ ಜನರಿಗೆ ದೊಡ್ಡ ಆಘಾತ ನೀಡಿತ್ತು.

Advertisement
Advertisement

ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಸರಕಾರ ತಕ್ಷಣವೇ ಎಚ್ಚೆತ್ತುಕೊಂಡಿದೆ. ಸಾರ್ವಜನಿಕರ ಆಕ್ರೋಶಕ್ಕೆ ಮಣಿದು ಮೊಸರಿನ ದರವನ್ನು ಕಡಿಮೆ ಮಾಡುವಂತೆ ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಸಂಬಂಧಪಟ್ಟ ಹಾಲು ಒಕ್ಕೂಟಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ರೂ.3 ರಿಂದ 4 ಇಳಿಸಲು ಚಿಂತೆ ಮಾಡಲಾಗಿದೆ ಎನ್ನುವ ಮಾಹಿತಿ ಇದ್ದು, ಇದಕ್ಕೆ ಸಂಬಂಧಿಸಿದ ಅಧಿಕೃತ ಆದೇಶವು ಶೀಘ್ರದಲ್ಲೇ ಹೊರಬೀಳುವ ಸಾಧ್ಯತೆಯಿದೆ.

Advertisement
Advertisement
Advertisement