Home latest ಪತಿಯ ಕಿರಿಕಿರಿಯಿಂದ ಬೇಸತ್ತು ತನ್ನ ಐವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಪತಿಯ ಕಿರಿಕಿರಿಯಿಂದ ಬೇಸತ್ತು ತನ್ನ ಐವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ

Hindu neighbor gifts plot of land

Hindu neighbour gifts land to Muslim journalist

ರಾಜಸ್ಥಾನ: ತನ್ನ ಐವರು ಹೆಣ್ಣು ಮಕ್ಕಳೊಂದಿಗೆ, ಪತಿಯ ಕಿರಿಕಿರಿಯನ್ನು ತಾಳಲಾರದೆ ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾಯಕ ಘಟನೆ ರಾಜಸ್ಥಾನದ ಕೋಟಾ ನಗರದಲ್ಲಿ ನಡೆದಿದೆ.

ಭಾನುವಾರ ಗ್ರಾಮಸ್ಥರು ಬಾವಿಯಲ್ಲಿ ಮೃತದೇಹಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದು,ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

ಪತಿ ಹಾಗೂ ಪತ್ನಿಯ ನಡುವೆ ದಿನವೂ ಜಗಳ ನಡೆಯುತ್ತಿತ್ತು ಎನ್ನಲಾಗಿದ್ದು,ಈ ವಿಷಯಕ್ಕೆ ಬೇಸತ್ತ ಮಹಿಳೆಯು ತನ್ನ ಪತಿ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ಹೋಗಿದ್ದ ಸಂದರ್ಭದಲ್ಲಿ ತನ್ನ ಐವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗಿದೆ.ಇನ್ನೂ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದರೂ, ಪೊಲೀಸರು ಈ ಬಗ್ಗೆ ಇನ್ನಷ್ಟು ತನಿಖೆಗಳನ್ನು ನಡೆಸುತ್ತಿದ್ದಾರೆ. ಪೊಲೀಸರ ತನಿಖೆಯಿಂದ ಪ್ರಕರಣದ ಸತ್ಯಾಂಶ ಹೊರಬರಬೇಕಿದೆ.