ಬುಧವಾರ, 4 ನವೆಂಬರ್ 2026

ಸುರತ್ಕಲ್‌: ಪೊಲೀಸರ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ ಆರೋಪ; ಪ್ರಕರಣ ಸಿಐಡಿಗೆ ಹಸ್ತಾಂತರ

Advertisement
Advertisement

ಸುರತ್ಕಲ್‌: ಪೊಲೀಸರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾದ ಮೊಗವೀರ ಸಮಾಜದ ಸೋಮನಾಥ ಸುವರ್ಣ ಅವರ ಸಾವಿನ ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ ಹಸ್ತಾಂತರ ಮಾಡಿದೆ.

Sponsored

ಸೋಮನಾಥ ಆತ್ಮಹತ್ಯೆ ಪ್ರಕರಣದಲ್ಲಿ ಮೊಗವೀರ ಸಮಾಜದ ಮುಖಂಡರು ಪೊಲೀಸರ ವಿರುದ್ಧ ಕ್ರಮಕ್ಕೆ ಎರಡು ದಿನಗಳ ಗಡುವು ನೀಡಿದ್ದರು. ಸಾವಿನ ಪ್ರಕರಣ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತು ಸಮಗ್ರ ತನಿಖೆ ಮಾಡಬೇಕೆಂದು ಒತ್ತಾಯ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರ್‌ ಅವರ ಶಿಫಾರಸು ಆಧರಿಸಿ ಪ್ರಕರಣವನ್ನು ಡಿಜಿಪಿ ಎಂ ಎ ಸಲೀಂ ಸಿಐಡಿಗೆ ವಹಿಸಿದ್ದಾರೆ.

Advertisement
Advertisement
Advertisement
Advertisement
Advertisement