Home Education Teachers : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್!

Teachers : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್!

Hindu neighbor gifts plot of land

Hindu neighbour gifts land to Muslim journalist

ಇಂದಿನ ಕಾಲದಲ್ಲಿ ಶಿಕ್ಷಣ (education) ಅತ್ಯಗತ್ಯವಾಗಿದ್ದು, ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರು ಮಹತ್ತರ ಪಾತ್ರ ವಹಿಸುತ್ತಾರೆ. ಇದೀಗ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(education minister) ಸಚಿವ ಬಿ.ಸಿ. ನಾಗೇಶ್ ರವರು ಪ್ರೌಢಶಾಲೆ ಶಿಕ್ಷಕರ ನೇಮಕಾತಿ ವಯೋಮಿತಿ ಎರಡು ವರ್ಷ ಹೆಚ್ಚಳ ಮಾಡುವ ಕುರಿತು ಮಾಹಿತಿ ನೀಡಿದ್ದಾರೆ.

 

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತಂತೆ ಸಚಿವರು ಮಾಹಿತಿ ನೀಡಿದ್ದು, ಮಹಾಮಾರಿ ಕೋವಿಡ್(covid-19) ಹಿನ್ನೆಲೆಯಲ್ಲಿ 2022 ರಲ್ಲಿ ಎರಡು ವರ್ಷಗಳ ವಯೋಮಿತಿ ಹೆಚ್ಚಳ ಮಾಡಿರುವ ಕುರಿತು ಮಾಹಿತಿ ನೀಡಿದ್ದಾರೆ. ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಎರಡು ವರ್ಷ ವಯೋಮಿತಿ ಹೆಚ್ಚಳ ಮಾಡಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯೊಂದಿಗೆ ಈ ಕುರಿತು ಚರ್ಚೆ ನಡೆಸುವ ಬಗ್ಗೆ ಬಿಜೆಪಿ ಸದಸ್ಯ ಎಸ್.ವಿ. ಸಂಕನೂರ ರವರು ಅವರು ವಿಧಾನ ಪರಿಷತ್ ನಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಸಚಿವರು ಉತ್ತರ ನೀಡಿದ್ದಾರೆ.

 

ಇದೆ ವೇಳೆ, ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಸಿಬ್ಬಂದಿಗಳನ್ನು ಭರ್ತಿ ಮಾಡುವ (allotment of teaching staff)  2 ವರ್ಷ ವಯೋಮಿತಿ ಹೆಚ್ಚಳದ ಕುರಿತು ಪ್ರಸ್ತಾವನೆ ಸ್ವೀಕೃತವಾಗಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ನಡೆಸುವ ಬಗ್ಗೆ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಸಚಿವ ಬಿ.ಸಿ. ನಾಗೇಶ್ ರವರು ಮಾಹಿತಿ ನೀಡಿದ್ದಾರೆ.