ಶನಿವಾರ, 24 ಅಕ್ಟೋಬರ್ 2026

ನೆಲ್ಯಾಡಿ :ಟೆಂಪೋ ಟ್ರಾವೆಲರ್ ಹಾಗೂ ಮಾರುತಿ ಸುಝುಕಿ ಬೀಝಾ ಕಾರು ನಡುವೆ ಮುಖಾಮುಖಿ ಢಿಕ್ಕಿ|ಐವರಿಗೆ ಗಂಭೀರ ಗಾಯ

ನೆಲ್ಯಾಡಿ: ಟೆಂಪೋ ಟ್ರಾವೆಲರ್ ಹಾಗೂ ಮಾರುತಿ ಸುಝುಕಿ ಬೀಝಾ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ೭೫ರ ಗುಂಡ್ಯ ಸಮೀಪದ ತಿರುವಿನಲ್ಲಿ ನಿನ್ನೆ ಸಂಜೆ ನಡೆದಿದೆ.

ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ
ಟೆಂಪೋ ಟ್ರಾವೆಲರ್ ಹಾಗೂ ಎದುರಿನಿಂದ ಬರುತ್ತಿದ್ದ
ತಮಿಳುನಾಡು ಮೂಲದವರಿದ್ದ ಬೀಝಾ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಈ ಘಟನೆಯಲ್ಲಿ ಕಾರಿನಲ್ಲಿದ್ದ ಹಾಗೂ ಟ್ರಾವೆಲ್ಲರ್‌ನಲ್ಲಿದ್ದ ಒಟ್ಟು ಐವರು ಗಂಭೀರ ಗಾಯಗೊಂಡಿದ್ದು, ಉಳಿದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.ಗಾಯಾಳುಗಳನ್ನು ಸ್ಥಳೀಯರು ತಕ್ಷಣವೇ 108ಅಂಬ್ಯುಲೆನ್ಸ್
ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ